ರಾಜ್ಯ

ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಬ್ರೇಕ್! ನಿಯಮ ಉಲ್ಲಂಘಿಸಿದರೆ 10 ಪಟ್ಟು ದಂಡ

ಡೊನೇಷನ್ ಅನ್ನೋದು ತಪ್ಪು ಎಂದು ಗೊತ್ತಿದ್ದರು ಸಹ, ಸಾವಿರಾರೂ ರೂಪಾಯಿ ಡೊನೇಷನ್ ಕೊಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತೇವೆ. ಆದ್ರೆ, ಇದೀಗ ಖಾಸಗಿ ಶಾಲೆಗಳ ಡೊನೇಷನ್ ಹಾವಳಿಗೆ ಲಗಾಮು ಹಾಕಲು ಮುಂದಾಗಿರುವ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಆ ಕುರಿತ ವರದಿ ಇಲ್ಲಿದೆ:

ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಬ್ರೇಕ್! ನಿಯಮ ಉಲ್ಲಂಘಿಸಿದರೆ 10 ಪಟ್ಟು ದಂಡ
ಖಾಸಗಿ ಶಾಲೆ — Online Desk
Published On :

ಬೆಂಗಳೂರು: ನಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಪಠ್ಯದೊಂದಿಗೆ ಆಟದಲ್ಲೂ ಹಾಗೂ ತಂತ್ರಜ್ಞಾನದಲ್ಲೂ ಮುಂದಿರಬೇಕು ಅನ್ನುತ್ತಾ ಖಾಸಗಿ ಶಾಲೆಗಳಿಗೆ ಸೇರಿಸುತ್ತೇವೆ. ಈ ವೇಳೆ ಡೊನೇಷನ್ ಅನ್ನೋದು ತಪ್ಪು ಎಂದು ಗೊತ್ತಿದ್ದರು ಸಹ ಸಾವಿರಾರೂ ರೂಪಾಯಿ ಡೊನೇಷನ್ ಕೊಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತೇವೆ. ಆದ್ರೆ, ಇದೀಗ ಖಾಸಗಿ ಶಾಲೆಗಳ ಡೊನೇಷನ್ ಹಾವಳಿಗೆ ಲಗಾಮು ಹಾಕಲು ಮುಂದಾಗಿರುವ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಆ ಕುರಿತ ವರದಿ ಇಲ್ಲಿದೆ:

ಡೊನೇಷನ್ ಪಡೆದರೆ, 10 ಪಟ್ಟು ದಂಡ!

ಖಾಸಗಿ ಶಾಲೆಗಳಲ್ಲಿ ದಾಖಲಾತಿ ಸಮಯದಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವುದು ಮತ್ತು ಪೋಷಕರಿಗೆ ಪಾರದರ್ಶಕತೆ ಒದಗಿಸುವ ಮುಖ್ಯ ಉದ್ದೇಶದೊಂದಿಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು, ಖಾಸಗಿ ಶಾಲೆಗಳು 2025-26ನೇ ಸಾಲಿಗೆ ಮಕ್ಕಳ ದಾಖಲಾತಿ ಮತ್ತು ಶುಲ್ಕ ವಸೂಲಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಆ ಶಾಲೆಗಳು ತಾವು ನಿಗದಿಪಡಿಸಿರುವ ಶುಲ್ಕದ ವಿವರಗಳನ್ನು ಶಾಲಾ ವೆಬ್‌ಸೈಟ್‌ ಹಾಗೂ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂದು ತಿಳಿಸಿದೆ.

ಮುಂದುವರೆದು, ದಾಖಲಾತಿ ಪ್ರಕ್ರಿಯೆಯಲ್ಲಿ ಪೋಷಕರಿಂದ ಕಾನೂನುಬಾಹಿರವಾಗಿ ಡೊನೇಷನ್ ಪಡೆದರೆ, ಪಡೆದ ಶುಲ್ಕದ 10 ಪಟ್ಟು ದಂಡವನ್ನು ಆ ಶಾಲೆಗಳಿಗೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಖಾಸಗಿ ಶಾಲೆ
ಖಾಸಗಿ ಶಾಲೆ — Online Desk

ಪ್ರವೇಶ ಪರೀಕ್ಷೆ ನಡೆಸಿದರೆ ದಂಡ

ಇದೆ ವೇಳೆ ಖಾಸಗಿ ಶಾಲೆಗಳಲ್ಲಿ ಸೀಟು ನೀಡುವ ಮುನ್ನ ಮಗು ಅಥವಾ ಪೋಷಕರನ್ನು ಯಾವುದೇ ರೀತಿಯ ಟೆಸ್ಟ್ ಅಥವಾ ಸಂದರ್ಶನಕ್ಕೆ ಒಳಪಡಿಸಿದರೆ ಅಂತಹ ಶಾಲೆಗಳಿಗೆ ₹25,000 ದಂಡ ಕೂಡ ವಿಧಿಸಲಾಗುತ್ತದೆ. ಪುನರಾವರ್ತಿತ ತಪ್ಪಿಗೆ ಪ್ರತಿ ಬಾರಿ 50,000 ರೂಪಾಯಿ ದಂಡ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.