ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ
ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ.

ಬೆಂಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದರಿಂದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶುಕ್ರವಾರ ಬೆಳಗ್ಗೆ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಬಂದಿದ್ದ ಅದ್ವೈತ್, ಬೆಟ್ಟದ ಪಾರ್ಕಿಂಗ್‌ನಲ್ಲಿ ಬುಲೆಟ್ ಬೈಕ್ ಪಾರ್ಕ್ ಮಾಡಿ ಬೆಟ್ಟ ಏರಿದ ನಂತರ ನಾಪತ್ತೆಯಾಗಿದ್ದಾರೆ.
ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್‌ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಬಿಟ್ಟು ಪರಿಶೀಲನೆ ನಡೆಸಲಾಗುತ್ತಿದೆ.
ಶಿವಗಂಗೆ ಬೆಟ್ಟ ಸಮುದ್ರದ ಮಟ್ಟದಿಂದ 4,800 ಅಡಿ ಎತ್ತರದಲ್ಲಿದೆ. ಅಪಾಯಕಾರಿ ರೀತಿಯಲ್ಲಿ ಶಾಂತಲಾ ಡ್ರಾಪ್ ಇದೆ. ಮರಗಿಡಗಳು ಕಲ್ಲು ಬಂಡೆಗಳಿಂದ ಕೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



