ರಾಜ್ಯ

ಚಾಮರಾಜನಗರ: ತಂಗಿಯೊಂದಿಗೆ ಅಕ್ರಮ ಸಂಬಂಧ; ಯುವಕನನ್ನು ಬರ್ಬರವಾಗಿ ಹತ್ಯೆಗೈದ ಅಣ್ಣ!

ಕೊಲೆಯಾದ ಯುವಕನನ್ನು ಕೊಕ್ಕನಹಳ್ಳಿ ಗ್ರಾಮದ ನಿವಾಸಿ ಮಹೇಶ್(26) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ನಿವಾಸಿ ಕುಮಾರಸ್ವಾಮಿ ಎಂಬುವವರು ಕೊಲೆ ಮಾಡಿದ್ದಾರೆ.

ಚಾಮರಾಜನಗರ: ತಂಗಿಯೊಂದಿಗೆ ಅಕ್ರಮ ಸಂಬಂಧ; ಯುವಕನನ್ನು ಬರ್ಬರವಾಗಿ ಹತ್ಯೆಗೈದ ಅಣ್ಣ!
ಪೊಲೀಸ್ ಸಿಬ್ಬಂದಿ
Published On :

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೊಕ್ಕನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕೊಲೆಯಾದ ಯುವಕನನ್ನು ಕೊಕ್ಕನಹಳ್ಳಿ ಗ್ರಾಮದ ರುದ್ರಶೆಟ್ಟಿ ಅವರ ಪುತ್ರ ಮಹೇಶ್(26) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ನಿವಾಸಿ ಕುಮಾರಸ್ವಾಮಿ ಎಂಬುವವರು ಕೊಲೆ ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಅವರ ತಂಗಿಯೊಂದಿಗೆ ಮಹೇಶ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧ ಇಬ್ಬರ ನಡುವೆ ಆಗಾಗಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಇದೀಗ ಆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಸ್ಥಳಕ್ಕೆ ಚಾಮರಾಜನಗರ ಎಎಸ್ಪಿ, ಡಿವೈಎಸ್ಪಿ ಹಾಗೂ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಮಾರಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.