ಮನೆಯೊಳಗೇ ನಿಗೂಢ ಸಾವು, ವರ್ಷ ಕಳೆದರೂ ಸುಳಿವೇ ಇಲ್ಲ; ಬೆಂಗಳೂರಿನಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ದಾಕ್ಷಾಯಿಣಿ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಹಾಗೂ ಮಗನ ಸಾವಿನ ಬಳಿಕ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು: ಬೆಂಗಳೂರಿನ ಮನೆಯೊಂದರಲ್ಲಿ ವರ್ಷಗಳ ಹಿಂದೆ ಸಾವನ್ನಪ್ಪಿದ ಮಹಿಳೆ ಅಸ್ತಿಪಂಜರ ರೂಪದಲ್ಲಿ ಪತ್ತೆಯಾಗಿದ್ದಾರೆ.
ಬೆಂಗಳೂರಿನ ಬಾಗಲಗುಂಟೆ ಪ್ರದೇಶದ ದ್ವಿಮಹಡಿ ಮನೆಯಲ್ಲಿ 52 ವರ್ಷದ ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು, ಮೃತರನ್ನು 52 ವರ್ಷದ ದಾಕ್ಷಾಯಿಣಿ ಎಂದು ಗುರುತಿಸಲಾಗಿದೆ. ಅವರು ಸುಮಾರು ಒಂದು ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಆದರೆ ಮನೆಯೊಳಗೇ ಮೃತದೇಹ ಉಳಿದುಕೊಂಡಿದ್ದರೂ ಇದುವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬಾಗಲಗುಂಟೆಯ ಹವನೂರು ಲೇಔಟ್‌ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ದಾಕ್ಷಾಯಿಣಿ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಹಾಗೂ ಮಗನ ಸಾವಿನ ಬಳಿಕ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ಪತಿ ಉಮೇಶ್ ಸುಮಾರು 10 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ಅವರ ಮಗ ಕೂಡ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು.
ಮಹಿಳೆ ಸುಮಾರು ಒಂದು ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಅವಧಿಯಲ್ಲಿ ಅವರ ಪುತ್ರಿ ಹಾಗೂ ಅಳಿಯ ಮನೆಗೆ ಭೇಟಿ ನೀಡಿರಲಿಲ್ಲ ಎನ್ನಲಾಗಿದೆ.
ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯ ಸಾವಿಗೆ ನಿಖರ ಕಾರಣವೇನು ಮತ್ತು ಯಾವ ಪರಿಸ್ಥಿತಿಯಲ್ಲಿ ಸಾವು ಸಂಭವಿಸಿದೆ ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



