ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ; ನಾಳೆ ಈ ಮಾರ್ಗದಲ್ಲಿ ಎರಡು ಗಂಟೆ ಮೆಟ್ರೋ ಬಂದ್!
ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ನಾಳೆ ಕೆಲವು ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಎರಡು ಘಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಲಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ನಾಳೆ ಕೆಲವು ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಎರಡು ಘಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಲಿದೆ. ಆ ಕುರಿತ ವರದಿ ಇಲ್ಲಿದೆ:
ಯಾವ ಮಾರ್ಗ ಬಂದ್?
ನಮ್ಮ ಮೆಟ್ರೋದ ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ಎಂ.ಜಿ. ರಸ್ತೆವರೆಗಿನ ನಿಲ್ದಾಣಗಳ ನಡುವೆ ತುರ್ತು ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 2 ಗಂಟೆಗಳ ಕಾಲ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು BMRCL ತಿಳಿಸಿದೆ.
ಯಾವ ಟೈಮ್ ನಲ್ಲಿ ಮೆಟ್ರೋ ಬಂದ್?
ನಾಳೆ ಅಂದರೆ, ಆಗಸ್ಟ್ 9 ರ ಭಾನುವಾರದಂದು ಬೆಳಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ 2 ಗಂಟೆಗಳ ಕಾಲ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸಂಚಾರ ಇರುವುದಿಲ್ಲ.
ಮುಂದುವರೆದು, ಚಲ್ಲಘಟ್ಟದಿಂದ ಎಂ.ಜಿ. ರಸ್ತೆ ವರೆಗೆ ಹಾಗೂ ವೈಟ್‌ಫೀಲ್ಡ್ (ಕಾಡುಗೋಡಿ) ಯಿಂದ ಬೈಯಪ್ಪನಹಳ್ಳಿ ವರೆಗೆ ಮೆಟ್ರೋ ಲಭ್ಯವಿರುತ್ತದೆ. ಇನ್ನುಳಿದಂತೆ, ಹಸಿರು ಮಾರ್ಗ ಹಾಗೂ ಹಳದಿ ಮಾರ್ಗದ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಏತನ್ಮಧ್ಯೆ, ಬೆಳಗ್ಗೆ 9:00 ಗಂಟೆಯ ನಂತರ ಸಂಪೂರ್ಣ ನೇರಳೆ ಮಾರ್ಗದಲ್ಲಿ (ವೈಟ್‌ಫೀಲ್ಡ್‌ನಿಂದ ಚಲ್ಲಘಟ್ಟದವರೆಗೆ) ಮೆಟ್ರೋ ರೈಲುಗಳು ಎಂದಿನಂತೆ ಸಾಮಾನ್ಯವಾಗಿ ಸಂಚರಿಸಲಿವೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



