ರಾಜ್ಯ

ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ, ಸಚಿವ ಸ್ಥಾನ ಖಚಿತ; ಕಿರಣ್ ರಿಜಿಜು ಕಾಂಗ್ರೆಸ್ ಬಗ್ಗೆ ಚಿಂತಿಸುವುದು ಬೇಡ: ಡಿ.ಕೆ ಶಿವಕುಮಾರ್

ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ ಎಂದರು.

ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ, ಸಚಿವ ಸ್ಥಾನ ಖಚಿತ; ಕಿರಣ್ ರಿಜಿಜು ಕಾಂಗ್ರೆಸ್ ಬಗ್ಗೆ ಚಿಂತಿಸುವುದು ಬೇಡ: ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದ್ದವರು ಕಾಂಗ್ರೆಸ್ ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆರಿಗೆ ಹೆಚ್ಚು ಸ್ಥಾನ ನೀಡಿದ್ದೆವು.

ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ ಎಂದರು. ದೆಹಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದಾಗ, “ಹೋಗಲೇಬೇಕಲ್ಲವೆ, ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದರು.

ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್ ಎಂ ಕೃಷ್ಣ ಅವರು ಹಲವು ಬಾರಿ ನಿಜಲಿಂಗಪ್ಪ ಅವರ ಜೊತೆಗೆ ಹೋಗಿದ್ದೇವೆ.

ಸೋನಿಯಾ ಗಾಂಧಿ ಅವರು ಕೂಡ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂದು ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಸ್ಮರಿಸಿದರು.

“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು.

ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.