ಬೀದರ್‌ನಲ್ಲಿ ಅಮಾನವೀಯ ಘಟನೆ: 2 ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದ ಕಿರಾತಕರು!
ಬೀದರ್ ನಲ್ಲಿ ಅಮಾನವೀಯ ಕೃತ್ಯ ನಡೆದಿದ್ದು ಕಿರಾತಕರು ಎರಡು ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದಿದ್ದಾರೆ. ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ.

ಬೀದರ್: ಬೀದರ್ ನಲ್ಲಿ ಅಮಾನವೀಯ ಕೃತ್ಯ ನಡೆದಿದ್ದು ಕಿರಾತಕರು ಎರಡು ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದಿದ್ದಾರೆ. ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಶಿಶು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿದ್ದರು. ಆದರೆ ಇಂದು ಸಾಯಂಕಾಲ ಗ್ರಾಮದ ಬಾವಿಯಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಗುವಿನ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



