Bidadi Township: ಒತ್ತಡವಿಲ್ಲ, ನಿಮ್ಮ ಇಚ್ಛೆಯಿದ್ದರೆ ಜಮೀನು ನೀಡಿ, ಪ್ರತಿ ಎಕರೆಗೆ 3 ಕೋಟಿ ರೂ ಪರಿಹಾರ ನೀಡುತ್ತೇವೆ: CM ಡಿ.ಕೆ ಶಿವಕುಮಾರ್; Video
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ (JDS) ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಯೋಜನೆಯನ್ನು ಸಮರ್ಥಿಸಿ ಇಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಬೆಂಗಳೂರು: ಬಿಡದಿ ಭೂಸ್ವಾಧೀನ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಮುಂದುವರಿಸುತ್ತಿದ್ದೇವೆ, ರೈತರು ಜಮೀನು ನೀಡುವುದು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಒತ್ತಡ ಹೇರುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ (JDS) ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಯೋಜನೆಯನ್ನು ಸಮರ್ಥಿಸಿ ಇಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ (Bidadi Township Project) ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ 25 ಲಕ್ಷ ರೂ. ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ 3 ಕೋಟಿ ರೂ.ಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50 ಶೇಕಡಾ ಅಭಿವೃದ್ಧಿಪಡಿಸಿದ ಜಾಗವನ್ನು ನೀಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



