ರಾಜ್ಯ

Nandi Hills ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ: ಓಡುತ್ತಿದ್ದಾಗ ಕುಸಿದುಬಿದ್ದು ಬೆಂಗಳೂರಿನ 31 ವರ್ಷದ ಟೆಕ್ಕಿ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಹಿಲ್ಸ್‌ನಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿರುವಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Nandi Hills ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ: ಓಡುತ್ತಿದ್ದಾಗ ಕುಸಿದುಬಿದ್ದು ಬೆಂಗಳೂರಿನ 31 ವರ್ಷದ ಟೆಕ್ಕಿ ಸಾವು
ಅಮನ್ ದೀಪ್ ಸಿಂಗ್ ಜಗಡೆ
Published On :

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಬೆಟ್ಟದ ತಪ್ಪಲಿನಲ್ಲಿ ಇಂದು ನಡೆದ 2ನೇ ಆವೃತ್ತಿಯ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ಓಟದ ವೇಳೆ 31 ವರ್ಷದ ಕ್ರೀಡಾಪಟುವೊಬ್ಬರು ಹೃದಯಾಘಾತದಿಂದ ದುರಂತ ಅಂತ್ಯಕಂಡಿದ್ದಾರೆ. ಮೃತರನ್ನು ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ (31) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಅಮನ್ ದೀಪ್ ಅವರು 21 ಕಿಲೋಮೀಟರ್ ವಿಭಾಗದ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದರು. ನಂದಿಗಿರಿಧಾಮದ ಬೆಟ್ಟದ ಅರ್ಧ ಭಾಗದಷ್ಟು ಓಟವನ್ನು ಯಶಸ್ವಿಯಾಗಿ ಮುಗಿಸಿದ್ದ ಅವರು, ಮುಂದುವರಿಯುತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಮ್ಯಾರಥಾನ್ ಸ್ವಯಂಸೇವಕರು ಮತ್ತು ಸಂಘಟಕರು ಅವರನ್ನು ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಸಾವಿಗೂ ಮುನ್ನ ಇನ್‌ಸ್ಟಾಗ್ರಾಮ್ ಪೋಸ್ಟ್

ಅಮನ್ ದೀಪ್ ಸಿಂಗ್ ಅವರು ಮ್ಯಾರಥಾನ್ ಓಟ ಆರಂಭಿಸುವ ಕೆಲವೇ ಗಂಟೆಗಳ ಮುನ್ನ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ "ದೇವರು ನನ್ನ ಜೊತೆ ಇದ್ದಾನೆ" (God is with me) ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಹಾಕಿದ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಈ ಎರಡನೇ ಆವೃತ್ತಿಯ ಮಾನ್ಸೂನ್ ಮ್ಯಾರಥಾನ್‌ನಲ್ಲಿ 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಆದರೆ ಓಟದ ಮಧ್ಯದಲ್ಲೇ ಸಂಭವಿಸಿದ ಈ ಸಾವು ಇಡೀ ರನ್ನಿಂಗ್ ಸಮುದಾಯ ಮತ್ತು ಕ್ರೀಡಾ ಪ್ರೇಮಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ.

ಅಮನ್ ದೀಪ್ ಸಿಂಗ್ ಜಗಡೆ
ಅಮನ್ ದೀಪ್ ಸಿಂಗ್ ಜಗಡೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.