ರಾಜ್ಯ

ಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; K-SETಗೆ ಅರ್ಜಿ ಆಹ್ವಾನಿಸಿದ KEA

ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗುವ ಕನಸು ಕಾಣುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; K-SETಗೆ ಅರ್ಜಿ ಆಹ್ವಾನಿಸಿದ KEA
K-SETಗೆ ಅರ್ಜಿ ಆಹ್ವಾನಿಸಿದ KEA — Online Desk
Published On :

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗುವ ಕನಸು ಕಾಣುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 10, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 05, 2026

  • ಅರ್ಜಿ ಶುಲ್ಕ ಪಾವತಿಸಲು ಕಡೆ ದಿನ: ಸೆಪ್ಟೆಂಬರ್ 06, 2026 (ಕೊನೆಯ ದಿನದವರೆಗೆ ಕಾಯದೇ ಬೇಗನೇ ಅರ್ಜಿ ಸಲ್ಲಿಸಿ)

  • ಪ್ರವೇಶ ಪತ್ರ ಬಿಡುಗಡೆ: ಅಕ್ಟೋಬರ್ 01, 2026 ರಿಂದ

  • ಪರೀಕ್ಷಾ ದಿನಾಂಕ: ಅಕ್ಟೋಬರ್ 11, 2026 (ಭಾನುವಾರ)

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯುಜಿಸಿ (UGC) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 55 ಅಂಕಗಳೊಂದಿಗೆ (SC/ST/OBC, ವಿಶೇಷಚೇತನ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಕನಿಷ್ಠ 50)ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪ್ರಸ್ತುತ ಸ್ನಾತಕೋತ್ತರ ಪದವಿಯಲ್ಲಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

  • ವಯೋಮಿತಿ: ಕೆ-ಸೆಟ್ ಪರೀಕ್ಷೆ ಬರೆಯಲು ಯಾವುದೇ ಗರಿಷ್ಠ ವಯೋಮಿತಿ ಇರುವುದಿಲ್ಲ.

  • ಒಟ್ಟು ವಿಷಯಗಳು: ಈ ಬಾರಿ ಒಟ್ಟು 37 ವಿವಿಧ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ವಿಶೇಷ ಚೇತನ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ 500 ರೂಪಾಯಿ.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು K-SET ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

  • ಅಲ್ಲಿ New Registration ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಸರು ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.

  • ನಂತರ ಲಾಗಿನ್ ಆಗಿ ಶೈಕ್ಷಣಿಕ ವಿವರ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.

  • ಕೊನೆಯಲ್ಲಿ ಶುಲ್ಕ ಪಾವತಿಸಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅಧಿಸೂಚನೆ ಲಿಂಕ್:

ಅರ್ಜಿ ಸಲ್ಲಿಸುವ ಲಿಂಕ್:

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.