JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿ.ಕೆ ಶಿವಕುಮಾರ್ ವ್ಯಂಗ್ಯ
ಅವರು ಆರಂಭಿಸಿದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅವರು ರೂ.25 ಲಕ್ಷ ಪರಿಹಾರ ನೀಡಲು ಪ್ರಸ್ತಾಪಿಸಿದ್ದರು. ನಾವು ರೂ.2.5 ಕೋಟಿಯಿಂದ ರೂ.3 ಕೋಟಿವರೆಗೆ ಪರಿಹಾರ ನೀಡುತ್ತಿದ್ದೇವೆ.

ಮಾಲೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ರೈತರು ಯಾರೂ ಭಾಗವಹಿಸುತ್ತಿಲ್ಲ. ಬೇರೆ ಕ್ಷೇತ್ರಗಳಿಂದ ಪಕ್ಷದ ಕಾರ್ಯಕರ್ತರನ್ನು ಕರೆತಂದು ಪಾದಯಾತ್ರೆ ನಡೆಸುತ್ತಿದ್ದಾರೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಹಾಗೂ ಪ್ರದರ್ಶನ ನಡೆಸುವುದು ಎಲ್ಲರ ಹಕ್ಕು. ಆದರೆ, ಜೆಡಿಎಸ್ ನಡೆಸುತ್ತಿರುವ ಈ ಪ್ರತಿಭಟನೆ ಕೇವಲ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಬಿದದಿ ಯೋಜನೆ ವಿರೋಧಿ ಪಾದಯಾತ್ರೆಯಲ್ಲಿ ಭಾಗವಹಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಅವರು ಆರಂಭಿಸಿದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅವರು ರೂ.25 ಲಕ್ಷ ಪರಿಹಾರ ನೀಡಲು ಪ್ರಸ್ತಾಪಿಸಿದ್ದರು. ನಾವು ರೂ.2.5 ಕೋಟಿಯಿಂದ ರೂ.3 ಕೋಟಿವರೆಗೆ ಪರಿಹಾರ ನೀಡುತ್ತಿದ್ದೇವೆ” ಎಂದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಿದದಿ ಯೋಜನೆ ಹಾಗೂ ನೈಸ್ ಯೋಜನೆ ಎರಡೂ ಒಂದೇ ರೀತಿಯವು ಎಂದು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಯೋಜನೆಗಳಿಗೆ ಸಹಿ ಹಾಕಿದ್ದು ಅವರೇ ಎಂದು ಹೇಳಿದರು.
ನೈಸ್ ಯೋಜನೆಯನ್ನು ಸೃಷ್ಟಿಸಿದ್ದು ಯಾರು? ಅವರೇ. ಆದರೆ ಅದು ಉತ್ತಮ ಯೋಜನೆಯಾಗಿ ಹೊರಹೊಮ್ಮಿದೆ. ಆ ರಸ್ತೆ ನಿರ್ಮಾಣವಾಗಿದ್ದರಿಂದಲೇ ಇಂದು ಬೆಂಗಳೂರು ಉಳಿದಿದೆ. ಅವರು ಮಾಡಿದ್ದು ತಪ್ಪು ಎಂದು ನಾನು ಹೇಳುವುದಿಲ್ಲ. ಆದರೆ ಅದರಲ್ಲಿ ಅವರ ಸ್ವಹಿತಾಸಕ್ತಿಯೂ ಇತ್ತು. ಸೂಕ್ತ ಸಮಯ ಬಂದಾಗ ಈ ಎಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತೇನೆ,” ಎಂದು ತಿಳಿಸಿದರು.
ಸಚಿವರ ಖಾತೆ ಹಂಚಿಕೆ ಕುರಿತು ಮಾತನಾಡಿ, ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಈ ಕುರಿತು ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲೇ ಖಾತೆ ಹಂಚಿಕೆ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



