ದಕ್ಷಿಣ ಕನ್ನಡ ಡಿಸಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರು: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು
ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಪ್ರದರ್ಶಿಸಲಾಗಿದ್ದು, ಇದಕ್ಕೆ ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.
ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ. ಆದರೆ ಇಲ್ಲಿ ಸಂಗಾತಿಯ ಹೆಸರು ಸೇರಿಸಿರುವುದು ಸರ್ಕಾರಿ ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಾ ಕುಳಾಯಿ ಪತ್ರದಲ್ಲಿ ಉಲ್ಲೇಖಿಸಿ ಆರೋಪಿಸಿದ್ದಾರೆ.
ಒಂದು ವೇಳೆ ಈ ನಾಮಫಲಕದ ತಯಾರಿಕೆ ಮತ್ತು ಅಳವಡಿಕೆಗೆ ಸಾರ್ವಜನಿಕ ಹಣ ವಿನಿಯೋಗವಾಗಿದ್ದರೆ, ಅದು ನಿಯಮಬಾಹಿರವಾಗುತ್ತದೆ. ಈ ಕುರಿತು ವೆಚ್ಚದ ದಾಖಲೆಗಳು, ಬಿಲ್‌ಗಳು ಹಾಗೂ ಶಿಷ್ಟಾಚಾರದ ಮಂಜೂರಾತಿಯನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ನಾಮಫಲಕ ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಾದ್ಯಂತ ಸರ್ಕಾರಿ ನಿವಾಸಗಳಲ್ಲಿ ಏಕರೂಪದ ಮಾರ್ಗಸೂಚಿ ಹೊರಡಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


