ದಾವಣಗೆರೆ: ಟೋಲ್ ಪ್ಲಾಜಾದಲ್ಲಿ ನುಗ್ಗಿಬಂದ ಟ್ರಕ್; ಸಮಯಪ್ರಜ್ಞೆಯಿಂದ ವ್ಯಕ್ತಿ ಬಚಾವ್! Video
CCTV ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಂಟೈನರ್ ಟ್ರಕ್ ವೇಗವಾಗಿ ಟೋಲ್‌ಲೇನ್ ನತ್ತ ಬರುತ್ತಿರುವುದು ಹಾಗೂ ಬಳಿಕ ನಿಯಂತ್ರಣ ತಪ್ಪಿದಂತೆ ಕಾಣಿಸುವುದು ಕಂಡುಬರುತ್ತದೆ.

ದಾವಣಗೆರೆ: ಕರ್ನಾಟಕದ ದಾವಣಗೆರೆ ಜಿಲ್ಲೆಯ ಟೋಲ್‌ಪ್ಲಾಜಾದಲ್ಲಿ ಭಾರೀ ಅಪಘಾತದಲ್ಲಿ ವ್ಯಕ್ತಿಯೋರ್ವ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆಯ CCTV ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ದಾವಣಗೆರೆಯ ಹೆಬ್ಬಾಳ್ ಟೋಲ್‌ಪ್ಲಾಜಾ ಕಡೆಗೆ ವೇಗವಾಗಿ ಬಂದ ಕಂಟೈನರ್ ಟ್ರಕ್ ವೊಂದು ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಪರಿಣಾಮ, ಟೋಲ್‌ಬೂತ್‌ನಲ್ಲಿದ್ದ ಸಿಬ್ಬಂದಿ ಹಾಗೂ ಅಲ್ಲಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
CCTV ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಂಟೈನರ್ ಟ್ರಕ್ ವೇಗವಾಗಿ ಟೋಲ್‌ಲೇನ್ ನತ್ತ ಬರುತ್ತಿರುವುದು ಹಾಗೂ ಬಳಿಕ ನಿಯಂತ್ರಣ ತಪ್ಪಿದಂತೆ ಕಾಣಿಸುವುದು ಕಂಡುಬರುತ್ತದೆ.
ಕಂಟೈನರ್ ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದಕ್ಕೂ ಮೊದಲು ಕಾರಿನ ಬಳಿ ವ್ಯಕ್ತಿಯೊಬ್ಬರು ನಿಂತಿದ್ದರು. ಹಿಂದಿನಿಂದ ಟ್ರಕ್ ಬರುತ್ತಿರುವುದನ್ನು ನೋಡಿ ಅಲ್ಲಿಂದ ಪಾರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



