ಪ್ರಜ್ವಲ್ ಗೆ ಮೊದಲೇ ವಾರ್ನ್ ಮಾಡಿದ್ದೆ, ದರ್ಶನ್ ಸೆಲ್ ನಲ್ಲಿ ಏನೂ ಸಿಕ್ಕಿಲ್ಲ- ಅಲೋಕ್ ಕುಮಾರ್; ಸರ್ಕಾರ ತನಿಖೆ ಮಾಡಲಿ- HD ರೇವಣ್ಣ; Video
ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಹೇಗೆ ಬಂತು ಎಂಬ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಮತ್ತು ಪೆನ್ ಡ್ರೈವ್ ಪತ್ತೆಯಾದ ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ನಿರ್ಲಕ್ಷ್ಯವಿರುವುದು ಸಾಬೀತಾಗಿದ್ದು, ತನಿಖೆಗೆ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದ ತಂಡ ರಚನೆ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಹೇಗೆ ಬಂತು ಎಂಬ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
ತನಿಖೆ ನಡೆಸಿ ವರದಿ ನೀಡಲು ಸೂಚನೆ
ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಜಾಮರ್ ಅಳವಡಿಸಲಾಗಿದ್ದು, ಸ್ಥಳೀಯರಿಗೆ ಟವರ್ ಸಿಗದೆ ನಿತ್ಯ ಪರದಾಡುತ್ತಾರೆ. ಹೀಗಿರುವಾಗ ಜೈಲಿನ ಒಳಗೆ ಏರ್ಟೆಲ್ ಕಂಪನಿಯ ಸಿಮ್ ಬಳಕೆಯಾಗುತ್ತಿದೆ. ಅದರಲ್ಲೂ ಆಂಧ್ರಪ್ರದೇಶದ ಏರ್ಟೆಲ್ ಸಿಮ್ಗಳು ಪತ್ತೆಯಾಗಿವೆ, ಈ ಬಗ್ಗೆ ಅನೇಕ ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಸಿಮ್ಗಳು ಪತ್ತೆ ಆಗುತ್ತಿವೆ. ಹೀಗಾಗಿ ಈ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಇಷ್ಟೆಲ್ಲಾ ಭದ್ರತೆ ಇದ್ದರೂ ಜೈಲಿನೊಳಗೆ ಹೇಗೆ ಮೊಬೈಲ್ ಹೋಗ್ತಿದೆ? ಇದರಲ್ಲಿ ಅಧಿಕಾರಿಗಳು ಏನಾದರೂ ಭಾಗಿಯಾಗಿದ್ದಾರೆಂಬ ಬಗ್ಗೆ ತನಿಖೆ ನಡೆಸುತ್ತೇವೆ. ಅಧಿಕಾರಿಗಳು ಭಾಗಿಯಾಗಿದ್ದರೆ, ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಇದರಲ್ಲಿ ಯಾರೆಲ್ಲಾ ಕೈವಾಡ ಇದೆ ಎಂಬುದರ ಪತ್ತೆಗೂ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣನಿಗೆ ಮೊದಲೇ ಎಚ್ಚರಿಕೆ ನೀಡಿದ್ದೆವು. ಇನ್ನು ನಟ ದರ್ಶನ್ ಸೆಲ್ ನಲ್ಲಿಯೂ ಹುಡುಕಾಟ ನಡೆಸಿದ್ದು ಮೊಬೈಲ್ ಅಥವಾ ಇನ್ನಿತರ ಸಾಧನಗಳು ಪತ್ತೆಯಾಗಿಲ್ಲ ಎಂದರು.
ಸರ್ಕಾರ ತನಿಖೆ ಮಾಡಲಿ-ಹೆಚ್ ಡಿ ರೇವಣ್ಣ
ಪುತ್ರನ ಮೊಬೈಲ್ ಪ್ರಕರಣ ಬಗ್ಗೆ ಇಂದು ವಿಧಾನಸೌಧ ಹೊರಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಹೆಚ್ ಡಿ ರೇವಣ್ಣ, ಗೃಹ ಇಲಾಖೆಯ ಜವಾಬ್ದಾರಿ ಪ್ರಿಯಾಂಕ್ ಖರ್ಗೆ ಅವರ ಬಳಿ ಇದೆ. ಅವರ ಪಕ್ಷವೇ ಅಧಿಕಾರದಲ್ಲಿದೆ. ಅವರೇ ತನಿಖೆ ನಡೆಸಲಿ ಎಂದಷ್ಟೇ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



