ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ.ಕೆ ಶಿವಕುಮಾರ್; Video
ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.

ಬೆಂಗಳೂರು: ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.
ರಕ್ಷಣಾ ವೇದಿಕೆಯ ಪ್ರಮುಖ ನಾಯಕರು ನಮ್ಮನ್ನು ಭೇಟಿ ಮಾಡಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದರು. ರಾಜ್ಯದ ಹಿತಾಸಕ್ತಿಗಾಗಿ ನಿಲುವು ತೆಗೆದುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಅವರಿಗೆ ನನ್ನ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ" ಎಂದು ಅವರು ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


