RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಗೆ ಹೊಸ ಕಾನೂನು ತರಲು ರಾಜ್ಯ ಸರ್ಕಾರ ಮುಂದು!
ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ನೋಂದಾಯಿಸದ ಸಂಘಟನೆಗಳು ಸಾರ್ವಜನಿಕ ಸ್ಥಳಗಳನ್ನು ಬಳಸದಂತೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ನೋಂದಾಯಿಸದ ಸಂಘಟನೆಗಳು ಸಾರ್ವಜನಿಕ ಸ್ಥಳಗಳನ್ನು ಬಳಸದಂತೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
RSS ಕಾನೂನು ಚೌಕಟ್ಟಿನಿಂದ ಹೊರಗಿದ್ದು ಅದನ್ನು ಕಾನೂನು ಚೌಕಟ್ಟಿನ ಅಡಿಗೆ ತರುವ ಉದ್ದೇಶವಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನಂತರ ಈ ಮಸೂದೆ ಮಂಡನೆಗೆ ವೇದಿಕೆ ಸಿದ್ಧವಾಗಿದೆ. ಈ ಅಧಿವೇಶನಲ್ಲಿ ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ ನೀಡಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂಘಟನೆ ಅಥವಾ ಸಂಸ್ಥೆ ಕಾರ್ಯಕ್ರಮ ಆಯೋಜಿಸುವ ಮುನ್ನ ಅನುಮತಿ ಪಡೆಯುವುದು ಈ ವಿಧೇಯಕದ ಅಡಿ ಕಡ್ಡಾಯವಾಗಿದೆ. ಇದರೊಂದಿಗೆ ಸಾರ್ವಜನಿಕವಾಗಿ RSS ನಡೆಸುವ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.
ಚಿತ್ತಾಪುರದಲ್ಲಿ RSS ಪಥಸಂಚಲನ ಆಯೋಜನೆಗೆ ಅನುಮತಿ ನಿರಾಕರಿಸಿದ ವಿಚಾರ ಈ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಅನುಮತಿ ನಿರಾಕರಣೆಯನ್ನು ಪ್ರಶ್ನಿಸಿ RSS ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ನಂತರ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಪಥಸಂಚಲನಕ್ಕೆ ಅವಕಾಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



