ರಾಜ್ಯ

ಪಾಕ್ ಸಂಪರ್ಕ ಶಂಕೆ: ಕಲಬುರಗಿ ಯುವಕನ ಬಂಧನ; ಸಾಮಾಜಿಕ ಜಾಲತಾಣದಲ್ಲಿ 'ದೇಶ ವಿರೋಧಿ' ಚಟುವಟಿಕೆ ಬಗ್ಗೆ ತನಿಖೆ

ಬಂಧಿತನನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮೂಲದ ಮೊಹಮ್ಮದ್ ಸಮೀರ್ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ನಡೆಸಿದ ದಾಳಿ ಬಳಿಕ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು.

ಪಾಕ್ ಸಂಪರ್ಕ ಶಂಕೆ: ಕಲಬುರಗಿ ಯುವಕನ ಬಂಧನ; ಸಾಮಾಜಿಕ ಜಾಲತಾಣದಲ್ಲಿ 'ದೇಶ ವಿರೋಧಿ' ಚಟುವಟಿಕೆ ಬಗ್ಗೆ ತನಿಖೆ
ಪಾಕ್ ಸಂಪರ್ಕ ಶಂಕೆ-ಕಲಬುರಗಿ ಯುವಕ ಸಮೀರ್ ಬಂಧನ
Published On :

ಕಲಬುರಗಿ: ಮಹತ್ವದ ಬೆಳವಣಿಗೆಯಲ್ಲಿ ಪಾಕ್ ಸಂಪರ್ಕ ಶಂಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ 'ದೇಶ ವಿರೋಧಿ ಚಟುವಟಿಕೆಗಳ ಆರೋಪದ ಮೇರೆಗೆ ಕಲಬುರಗಿಯಲ್ಲಿ 23ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತನನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮೂಲದ ಮೊಹಮ್ಮದ್ ಸಮೀರ್ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ನಡೆಸಿದ ದಾಳಿ ಬಳಿಕ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ದೇಶವಿರೋಧಿ ಹಾಗೂ ಮೂಲಭೂತವಾದಿ ಚಟುವಟಿಕೆಗಳಲ್ಲಿ ತೊಡಗಿವೆ ಎನ್ನಲಾದ ಹಲವು ಇನ್‌ಸ್ಟಾಗ್ರಾಂ ಖಾತೆಗಳನ್ನು ಆರೋಪಿ ಸಮೀರ್ ಫಾಲೋ ಮಾಡುತ್ತಿದ್ದ ಎಂಬುದು ಪತ್ತೆಯಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್. ಡಿ. ಅವರು ಪಿಟಿಐಗೆ ತಿಳಿಸಿದ್ದಾರೆ.

ಇಂತಹ ಸಾಮಾಜಿಕ ಜಾಲತಾಣ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸಮೀರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಖಾತೆಗಳನ್ನು ನಿರ್ವಹಿಸುತ್ತಿದ್ದ ವ್ಯಕ್ತಿಗಳಿಗೆ ಪಾಕಿಸ್ತಾನ ಅಥವಾ ಭಾರತದ ಹೊರಗಿನ ಇತರ ಯಾವುದೇ ಪ್ರದೇಶಗಳೊಂದಿಗೆ ಸಂಪರ್ಕವಿದೆಯೇ ಎಂಬುದನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.