ವಿಧಾನಸಭಾ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್ ಆಯ್ಕೆ; ಅವಿರೋಧವಾಗಿ ಆಯ್ಕೆಯಾದ ರೋಣ ಶಾಸಕ; Video
ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗದ ರೋಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗದ ರೋಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿ.ಎಸ್. ಪಾಟೀಲ್ ಎಂದೇ ಜನಪ್ರಿಯರಾಗಿರುವ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅನುಮೋದಿಸಿದರು. ಆ ಕುರಿತ ವರದಿ ಇಲ್ಲಿದೆ:
ಇಂದು ನಡೆದ ಸಭೆಯಲ್ಲಿ ಹಂಗಾಮಿ ಸ್ಪೀಕರ್ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ಮೊದಲು ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅವರು ಸಿಎಂ ಡಿಕೆಶಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟ ಸೇರುವ ಸಲುವಾಗಿ ಜೂನ್ 3 ರಂದು ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು.
ಬಿಜೆಪಿ-ಜೆಡಿಎಸ್ ಬಹಿಷ್ಕಾರ
ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹೆಸರನ್ನು ಮೊದಲೇ ಪ್ರಕಟಿಸಿ ಸದನದ ಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸ್ಪೀಕರ್ ಆಯ್ಕೆ ಪ್ರಕ್ರಿಯೆಯನ್ನು ಬಹಿಷ್ಕರಿಸಿದ್ದವು. ಹೀಗಾಗಿ ಯಾವುದೇ ಪ್ರತಿಪಕ್ಷದ ಅಭ್ಯರ್ಥಿ ಇಲ್ಲದೆ ಜಿ.ಎಸ್. ಪಾಟೀಲ್ ಅವರು ಅವಿರೋಧವಾಗಿ ಧ್ವನಿ ಮತದ ಮೂಲಕ ಆಯ್ಕೆಯಾದರು.
ಯಾರು ಈ ಜಿ.ಎಸ್. ಪಾಟೀಲ್?
ಲಿಂಗಾಯತ ಸಮುದಾಯಕ್ಕೆ ಸೇರಿದ ಜಿ.ಎಸ್. ಪಾಟೀಲ್ ಅವರು ರೋಣ ಕ್ಷೇತ್ರದಿಂದ ಒಟ್ಟು ನಾಲ್ಕು ಬಾರಿ (1989, 1999, 2013 ಮತ್ತು 2023) ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅವರು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ತಂದೆ ಸಂಗನಗೌಡ ಬಸನಗೌಡ ಪಾಟೀಲ್ ಅವರು ಈ ಹಿಂದೆ ವಿಜಾಪುರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


