ರಾಜ್ಯ

'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಸಿಎಂಗೆ ಜಮೀರ್ ಅಹ್ಮದ್ ಪತ್ರ

ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಜಮೀರ್ ಅವರು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಜಯನಗರದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುವ ಕರ್ತವ್ಯದಿಂದಲೂ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.

'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಸಿಎಂಗೆ ಜಮೀರ್ ಅಹ್ಮದ್  ಪತ್ರ
ಜಮೀರ್ ಅಹ್ಮದ್ ಖಾನ್
Published On :

ಬೆಂಗಳೂರು: ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಉಲ್ಲೇಖಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲೂ ಜಮೀರ್ ಅವರು ವಿಜಯನಗರ ಜಿಲ್ಲೆಯ ಉಸ್ತುವಾರಿ ಹೊಣೆ ಹೊಂದಿದ್ದರು.

ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ವಿಧಾನಸಭಾ ಉಪಚುನಾವಣೆಗಳು ಹಾಗೂ ಪಕ್ಷದ ಸಂಘಟನಾ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿರ್ವಹಿಸಲು ನನಗೆ ಸಮಯ ಸಿಗುವುದಿಲ್ಲ. ಆದ್ದರಿಂದ ನನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡದಂತೆ ಮನವಿ ಮಾಡುತ್ತೇನೆ ಎಂದು ಜಮೀರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Story image

ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಜಮೀರ್ ಅವರು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಜಯನಗರದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುವ ಕರ್ತವ್ಯದಿಂದಲೂ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿಗೆ ಸಂಬಂಧಿಸಿದ ವರದಿ ಸಲ್ಲಿಸುವ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿರುವುದಾಗಿ ಜಮೀರ್ ಅವರು ಡಿ ಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.