ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ
ಕರ್ನಾಟಕ ಗೃಹ ಮಂಡಳಿ ರಾಜ್ಯದಲ್ಲಿ ವಸತಿ ಯೋಜನೆಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಮುಖ ಸಂಸ್ಥೆಯಾಗಿದೆ.

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ನೇಮಕ ಮಾಡಲಾಗಿದೆ.
ನೇಮಕಾತಿ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಗೃಹಮಂಡಳಿ ಅಧ್ಯಕ್ಷರಾಗಿ ಅರಸಿಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಕಾರ್ಯನಿರ್ವಹಿಸುತ್ತಿದ್ದರು. ಶಿವಲಿಂಗೇಗೌಡ ಈಗ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ನಿಯುಕ್ತಿಗೊಂಡಿದ್ದು, ಗೃಹಮಂಡಳಿ ಅಧ್ಯಕ್ಷ ಸ್ಥಾನ ತೆರವುಗೊಂಡಿತ್ತು.
ಕರ್ನಾಟಕ ಗೃಹ ಮಂಡಳಿ ರಾಜ್ಯದಲ್ಲಿ ವಸತಿ ಯೋಜನೆಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಮುಖ ಸಂಸ್ಥೆಯಾಗಿದೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ವಸತಿ ಯೋಜನೆಗಳ ಅಭಿವೃದ್ಧಿ, ಭೂಮಿ ಸ್ವಾಧೀನ ಮತ್ತು ವಸತಿ ಸೌಲಭ್ಯಗಳ ವಿತರಣೆ ಮುಂತಾದ ಕೆಲಸಗಳನ್ನು ಈ ಮಂಡಳಿ ನೋಡಿಕೊಳ್ಳುತ್ತದೆ. ಅಧ್ಯಕ್ಷರಾಗಿ ನೇಮಕಗೊಂಡ ಶ್ರೀನಿವಾಸ ಮಾನೆ ಅವರು ಈಗ ಈ ಎಲ್ಲಾ ಚಟುವಟಿಕೆಗಳ ಮೇಲ್ವಿಚಾರಣೆ ವಹಿಸಿಕೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



