80ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ CM ಡಿ.ಕೆ ಶಿವಕುಮಾರ್ ಧ್ವಜಾರೋಹಣ; Video
ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ.

ಬೆಂಗಳೂರು: ಇಂದು ಶನಿವಾರ, 2026ನೇ ಇಸವಿ ಆಗಸ್ಟ್ 15 ದೇಶದೆಲ್ಲೆಡೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು.ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಡಿಕೆ ಶಿವಕುಮಾರ್ ತೆರೆದ ಜೀಪಿನಲ್ಲಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಗಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮುಖ್ಯಮಂತ್ರಿಗಳು ಅದ್ದೂರಿಯಾಗಿ ಮತ್ತು ಭಕ್ತಿಪೂರ್ವಕವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು. ದೇಶದೆಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದ್ದ ಈ ದಿನದಂದು, ಡಿಸಿಎಂ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಈ ಮಹತ್ವದ ಸಂದರ್ಭದಲ್ಲಿ, ಅವರ ಪತ್ನಿ ಶ್ರೀಮತಿ ಉಷಾ ಶಿವಕುಮಾರ್ ಅವರು ಅವರ ಜೊತೆಯಲ್ಲಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಈ ಸಮಾರಂಭದಲ್ಲಿ, ಸಿಎಂ ಡಿ.ಕೆ. ಶಿವಕುಮಾರ್ ಅವರು ಮಹಾತ್ಮ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಮಹಾನ್ ನಾಯಕರಿಗೆ ಗೌರವ ನಮನ ಸಲ್ಲಿಸಿದರು. ಅವರ ತ್ಯಾಗ ಮತ್ತು ದೇಶಕ್ಕಾಗಿ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು. ಧ್ವಜಾರೋಹಣದ ನಂತರ, ದೇಶಭಕ್ತಿ ಗೀತೆಯಾದ ವಂದೇ ಮಾತರಂ ಅನ್ನು ಭಕ್ತಿಯಿಂದ ಪಠಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



