ರಾಜ್ಯ

2028 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ; ಡಿ.ಕೆ ಶಿವಕುಮಾರ್‌ ಮತ್ತೆ CM ಆಗುವುದು ನಿಶ್ಚಿತ: ತಂಗಡಗಿ

ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಮುಂದಿನ ದಿನಗಳಲ್ಲಿ‌‌ ಹಿಟ್ನಾಳ್‌ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ‌ ಯಾವುದೇ ಮುನಿಸುಗಳಿಲ್ಲ.

2028 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ; ಡಿ.ಕೆ ಶಿವಕುಮಾರ್‌ ಮತ್ತೆ CM ಆಗುವುದು ನಿಶ್ಚಿತ: ತಂಗಡಗಿ
ಡಿ.ಕೆ ಶಿವಕುಮಾರ್
Published On :

ಕೊಪ್ಪಳ: 2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್ ತಂಗಡಗಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, 2028 ಕ್ಕೆ‌ ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದೇವೆ ಎನ್ನುತ್ತಿದ್ದರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಂಗಡಗಿ, ಸಹಜವಾಗಿ ಹಿರಿಯರು ತಮ್ಮ ಭಾವನೆ‌ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ 2028 ಕ್ಕೂ ಕೂಡ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದರು.‌

ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಮುಂದಿನ ದಿನಗಳಲ್ಲಿ‌‌ ಹಿಟ್ನಾಳ್‌ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ‌ ಯಾವುದೇ ಮುನಿಸುಗಳಿಲ್ಲ. ಜಿಲ್ಲೆಯ ಶಾಸಕರೆಲ್ಲ ಒಟ್ಟಾಗಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಪ್ರದೇಶಗಳಲ್ಲಿ ಆರ್‌ಎಸ್ಎಸ್‌ ಚಟುವಟಿಕೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆಯಲ್ಲ ಎಂಬ ಪ್ರಶ್ನೆಗೆ ಸಂಘಟನೆಗಳು ಸಭೆ,‌ ಕಾರ್ಯಕ್ರಮ ನಡೆಸಲು ಅನುಮತಿ‌ ಕಡ್ಡಾಯ ಎಂದು ಹೇಳಿದ್ದೇವೆ. ಇದಕ್ಕೆ ಆರ್‌ಎಸ್‌ಎಸ್‌ ಹೊರತಾಗಿಲ್ಲ. ಈ ಸಂಘಟನೆಯವರು ಮೊದಲ ನೋಂದಣಿ ಬಗ್ಗೆ ಮಾಹಿತಿ ಕೊಡಲಿ. ಬಿಜೆಪಿಗರು ತಾಕತ್ತಿದ್ದರೆ ರಾಷ್ಟ್ರಧ್ವಜವನ್ನು ಆಅರ್‌ಎಸ್ಎಸ್‌ ಕೇಂದ್ರ ಕಚೇರಿ ಮೇಲೆ ಹಾರಿಸಲಿ. ಬಿಜೆಪಿಯವರಿಂದ ದೇಶ ಪ್ರೇಮದ ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.