ರಾಜ್ಯ

ಬೆಂಗಳೂರು: 'ಎಮ್ಮೆ ತರ ಇದ್ದೀಯಾ' ಎಂದು ಹೀಯಾಳಿಸಿ ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!

ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ.

ಬೆಂಗಳೂರು: 'ಎಮ್ಮೆ ತರ ಇದ್ದೀಯಾ' ಎಂದು ಹೀಯಾಳಿಸಿ ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!
Published On :

ಬೆಂಗಳೂರು: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬುವವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬೆಂಗಳೂರಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಆರೋಪಿಗಳು ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಜಗಳ ಮಾಡುತ್ತಿದ್ದರು. ಇದನ್ನು ಗಮನಿಸಿ PSI ನಯನಾ ಪರಿಸ್ಥಿತಿ ನಿಭಾಯಿಸಲು ಸ್ಥಳಕ್ಕೆ ತೆರಳಿದರು. ಈ ವೇಳೆ ಆರೋಪಿಗಳು ನಯನಾ ಅವರ ಮೇಲೆಯೇ ಹಲ್ಲೆ ಮಾಡಿದ್ದಲ್ಲೇ 'ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?' ಎಂದು ಬಾಡಿ ಶೇಮಿಂಗ್​ ಮಾಡಿದ್ದಾರೆ.​

ಈ ಘಟನೆ ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ನಾಲ್ವರು ಆರೋಪಿಗಳ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.