ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್
ತೊಮಿಯರ್ ಪಾಳ್ಯಕ್ಕೆ ಸೋಮವಾರ ಬೆಳಗ್ಗೆ ತೆರಳಿದ ತಹಶೀಲ್ದಾರ್ ಚೈತ್ರಾ ಅವರು ತಾಲೂಕು ಆಡಳಿತದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ವಿತರಿಸಿದರು.

ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ಸಮೀಪದ ಮರಿಯಮಂಗಲ ಬೀಟ್ ನಲ್ಲಿ ಸ್ವಾತಂತ್ರ್ಯ ದಿನದಂದು ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.
ತೊಮಿಯರ್ ಪಾಳ್ಯಕ್ಕೆ ಸೋಮವಾರ ಬೆಳಗ್ಗೆ ತೆರಳಿದ ತಹಶೀಲ್ದಾರ್ ಚೈತ್ರಾ ಅವರು ತಾಲೂಕು ಆಡಳಿತದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ವಿತರಿಸಿದರು. ಇದೇ ವೇಳೆ ಶಾಸಕ ಎಂ.ಆರ್. ಮಂಜುನಾಥ್ ವೈಯಕ್ತಿಕವಾಗಿ ತಲಾ 10 ಲಕ್ಷ ರೂ. ನೆರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಭಾನುವಾರ ನೀಡಿದ್ದ ಭರವಸೆಯಂತೆ ಪರಿಹಾರ ವಿತರಿಸಿದ ಶಾಸಕ ಮಂಜುನಾಥ್, ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಬಳಿಕ ಮೃತದೇಹಗಳ ಅಂತಿಮ ದರ್ಶನ ಪಡೆದರು.
ಹನೂರು ವನ್ಯಜೀವಿ ವಲಯದ ಶಾಗ್ಯ ವ್ಯಾಪ್ಯಿಯ ಹೊಳೆಮುರದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ಮೂವರು ಬಲಿಯಾಗಿದ್ದರು.
ಪ್ರತಿಭಟನೆ ವಾಪಸ್
ಶಾಸಕ ಮಂಜುನಾಥ್ ಅವರ ಪರಿಹಾರ ಭರವಸೆ ಬಳಿಕ ಪ್ರತಿಭಟನಾ ನಿರತ ಗ್ರಾಮಸ್ಥರು ತಮ್ಮ ಪ್ರತಿಭಟನೆ ವಾಪಸ್ ಪಡೆದರು ಎನ್ನಲಾಗಿದೆ.
ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಹೆಚ್ಚಿನ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ ಎಂದು ಮಂಜುನಾಥ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



