ರಾಜ್ಯ

ಬೆಂಗಳೂರು: ಮನೆಯಲ್ಲೇ ತಂದೆ-ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!

ಮೃತರನ್ನು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿನಂದನ್ ಮತ್ತು ಅವರ ನಾಲ್ಕು ವರ್ಷದ ಮಗ ಯದುವೀರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮನೆಯಲ್ಲೇ ತಂದೆ-ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!
ಪತ್ನಿ ಮಗುವಿನೊಂದಿಗೆ ಅಭಿನಂದನ್
Published On :

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗೆ 35 ವರ್ಷದ ವ್ಯಕ್ತಿ ಮತ್ತು ಅವರ ನಾಲ್ಕು ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿನಂದನ್ ಮತ್ತು ಅವರ ನಾಲ್ಕು ವರ್ಷದ ಮಗ ಯದುವೀರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿ ಮತ್ತು ಅವರ ಮಗನ ಸಾವಿನ ನಂತರ ಅಭಿನಂದನ್ ಅವರ ಪತ್ನಿ ಹರಿಣಿ ಅವರು ತುರ್ತು ಸಹಾಯವಾಣಿ 112 ಗೆ ಕರೆ ಮಾಡುವ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

ನಾವು ಸಂಬಂಧಿಕರ ಮನೆಗೆ ಹೋಗಿದ್ದೆವು ಮತ್ತು ಭಾನುವಾರ ಸಂಜೆ ಮನೆಗೆ ಮರಳಿದ್ದೇವೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಯಾವುದೇ ಇರಿತದ ಗಾಯಗಳು ಅಥವಾ ಯಾವುದೇ ಗಂಭೀರ ಗಾಯಗಳಿಲ್ಲದಿದ್ದರೂ, ಇಬ್ಬರ ಶವಗಳ ಮೇಲೆ ಸಣ್ಣಪುಟ್ಟ ಗಾಯಗಳು ಕಂಡುಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಇದು ಕೊಲೆಯೇ ಅಥವಾ ಅತ್ಮಹತ್ಯೆಯೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರವೇ ಖಚಿತವಾಗಲಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಅಭಿನವ್ ಹಾಗೂ ಹರಿಣಿ ದಂಪತಿ ಮದುವೆ ಬಳಿಕ ಚಿಕ್ಕಬಾಣವಾರದ ಗುಡ್ಡೆಬಸವಪುರದಲ್ಲಿ ನೆಲೆಸಿದ್ದರು. ಈ ದಂಪತಿಗೆ 4 ವರ್ಷ ಯದುವೀರ್ ಎಂಬ ಮಗನಿದ್ದ. ಈ ಜೋಡಿ ಬದುಕಲ್ಲಿ ಅದೇನ್ ಆಯ್ತೋ ಏನೋ? ರಾತ್ರೋ ರಾತ್ರಿ ಮನೆಯಲ್ಲೇ ತಂದೆ-ಮಗ ಇಬ್ಬರೂ ಹೆಣವಾಗಿದ್ದಾರೆ. ಹೆಂಡ್ತಿ ಮನೆಯಲ್ಲಿರುವಾಗಲೇ ಘಟನೆ ನಡೆದಿದ್ದು, ಹರಿಣಿ ಮೇಲೆಯೇ ಅನುಮಾನ ಮೂಡಿಸಿದೆ.

ಕೊಲೆಯೇ ಅಥವಾ ಅತ್ಮಹತ್ಯೆಯೋ?

ಮೇಲ್ನೋಟಕ್ಕೆ ತಂದೆ-ಮಗ ಇಬ್ಬರೂ ಕೊಲೆಯಾಗಿರೋ ಅನುಮಾನ ವ್ಯಕ್ತವಾಗಿದೆ. ಇಬ್ಬರು ಸಾವನ್ನಪ್ಪಿದ ವೇಳೆ ಮಹಿಳೆ ಹರಿಣಿ ಬೆಡ್​ ರೂಮ್​​ನಲ್ಲೇ ಮಲಗಿದ್ದಳು ಎಂದು ತಿಳಿದು ಬಂದಿದೆ. ಬೆಳಗ್ದೆ ಎದ್ದಾಗ ಮೃತಪಟ್ಟಿರೋದು ಗೊತ್ತಿಗಿದೆ ಎಂದು ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೇಲೆ ಗಾಯದ ಗುರುತು ಇದ್ದ ಕಾರಣ ಕೊಲೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಪತ್ನಿ ಹರಿಣಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.