ವಿಧಾನ ಪರಿಷತ್ ಉಪಸಭಾಪತಿ ಹುದ್ದೆಗೆ ಎಂಎಲ್‌ಸಿ ಉಮಾಶ್ರೀ ನಾಮಪತ್ರ ಸಲ್ಲಿಕೆ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಉಮಾಶ್ರೀ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ ಕಾಂಗ್ರೆಸ್ ಎಂಎಲ್‌ಸಿ ಉಮಾಶ್ರೀ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಹೊಸ ಉಪಸಭಾಪತಿಯ ಆಯ್ಕೆ ನಡೆಯಲಿದೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಉಮಾಶ್ರೀ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
2021ರ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಕೆ ಪ್ರಾಣೇಶ್ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದ ಹಿನ್ನೆಲೆಯಲ್ಲಿ, ಅವರು ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಹುದ್ದೆ ತೆರವಾಗಿತ್ತು.
2013ರಲ್ಲಿ ಉಮಾಶ್ರೀ ಅವರು ತೇರದಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಅವರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆಯಾಗಿ ಸೇವೆ ಸಲ್ಲಿಸಿದರು.
ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟಿಯಾಗಿ ಗುರುತಿಸಿಕೊಂಡಿರುವ ಉಮಾಶ್ರೀ ಅವರಿಗೆ 2008ರ 'ಗುಲಾಬಿ ಟಾಕೀಸ್' ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


