ರಾಜ್ಯ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಅವರ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ
ಶಿವಶಂಕರಪ್ಪ ಸಾಹುಕಾರ್​​
Published On :

ಬೆಂಗಳೂರು: ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅವರ ಮನೆ ಹಾಗೂ ಕಚೇರಿ ಸೇರಿದಂತೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಅವರ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.

ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆ ಮೇಲೂ ರೇಡ್ ನಡೆದಿದ್ದು, ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದವರ ಮನೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳಿಂದ 70-80 ಲಕ್ಷ ಲಂಚ ಪಡೆದಿರೋ ಆರೋಪ ಕೇಳಿಬಂದಿತ್ತು. ಮಧ್ಯವರ್ತಿಗಳ ಲಂಚದ ಬೇಡಿಕೆ ಕುರಿತು 4 ಎಫ್ಐಆರ್ ದಾಖಲಾಗಿದೆ. ಲಂಚದ ಬೇಡಿಕೆಯ ಆಡಿಯೋ ಸಾಕ್ಷ್ಯ ಇಡಿಗೂ ಸಲ್ಲಿಕೆಯಾಗಿತ್ತು. ಹೀಗಾಗಿ ನೇಮಕಾತಿ ಅಕ್ರಮದ ಹಣದ ಜಾಡು ಹಿಡಿದು ಇಡಿ ಶೋಧಕ್ಕೆ ಮುಂದಾಗಿದ್ದು, ದಾಖಲೆ, ಡಿಜಿಟಲ್ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದೆ ಎನ್ನಲಾಗಿದೆ.

ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿಯಾಗಿ ನೇಮಕವಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಮಾನಾತುಗೊಳಿಸಿದ್ದಾರೆ.

2019ರ ಸೆಪ್ಟೆಂಬರ್ 3ರಂದು ಕೆಪಿಎಸ್‌ಸಿ ಸದಸ್ಯರಾಗಿ ನೇಮಕವಾಗಿದ್ದ ಶಿವಶಂಕರಪ್ಪ ಅವರನ್ನು 2021ರ ಏಪ್ರಿಲ್ 3ರಂದು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.