ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ!
ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್‌ಹೌಸ್ ಅನ್ನು ಲೀಸ್‌ಗೆ ಪಡೆದು, ಕಳೆದ ಒಂದು ವರ್ಷದಿಂದ ಈ ನಕಲಿ ದಂಧೆಯಲ್ಲಿ ತೊಡಗಿದ್ದ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಮೂಲದಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆರೋಪಿ ಆಮದು ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆಯಾಗಿದೆ. ಫಾರ್ಮ್‌ಹೌಸ್ ಒಂದರಲ್ಲಿ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 5 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್‌ಹೌಸ್ ಅನ್ನು ಲೀಸ್‌ಗೆ ಪಡೆದು, ಕಳೆದ ಒಂದು ವರ್ಷದಿಂದ ಈ ನಕಲಿ ದಂಧೆಯಲ್ಲಿ ತೊಡಗಿದ್ದ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಮೂಲದಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆಮದು ಮಾಡಿಕೊಳ್ಳುತ್ತಿದ್ದ. ಹಲವು ಬಹುರಾಷ್ಟ್ರೀಯ ಕಂಪನಿಗಳ ಲೇಬಲ್‌ಗಳನ್ನು ಬಳಸಿ ಮರುಪ್ಯಾಕಿಂಗ್ ಮಾಡುತ್ತಿದ್ದ ಎನ್ನಲಾಗಿದೆ.
ಕೇವಲ 600 ರೂ. ಮೌಲ್ಯದ ಔಷಧಿಗೆ ಮರುಪ್ಯಾಕಿಂಗ್ ಮಾಡಿದ ಬಳಿಕ 6,000 ರೂ. ಬೆಲೆಯ ಔಷಧಿಯ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಅತಿದೊಡ್ಡ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ನಕಲಿ ಔಷಧಿಗಳು, ಲೇಬಲ್‌ಗಳು, ಅವಧಿ ಮುಗಿದ ಔಷಧಿಗಳು, ಖಾಲಿ ಬಾಟಲ್‌ಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಆಹಾರ ಸುರಕ್ಷತಾ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



