ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!
ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ನಾಳೆ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯನಿವಾಸದಲ್ಲಿ ಸಾವನ್ನಪ್ಪಿದ್ದಾರೆ.
ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ನಾಳೆ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತಿಪಟೂರು ಕ್ಷೇತ್ರದಿಂದ 2008 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್, ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು ತಮ್ಮ ಆಡಳಿತಾವಧಿಯಲ್ಲಿ ಹಲವು ಪ್ರಮುಖ ಹಾಗೂ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದರು.
ಶಾಲಾ ಸಮವಸ್ತ್ರ ನಿಯಮ; ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಮತ್ತು ಶಿಸ್ತು ಪಾಲನೆ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಗಮನ ಸೆಳೆದಿದ್ದರು. ಶಿಕ್ಷಣದಲ್ಲಿ ಮೌಲ್ಯವರ್ಧನೆ; ಶಾಲಾ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಪ್ರಾರ್ಥನೆ ಮತ್ತು ಕಲಿವಿನ ವಾತಾವರಣ ಸುಧಾರಣೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು.
ಬಿ.ಇ. ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ತಮ್ಮ ರಾಜಕೀಯ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪೂರ್ಣಕಾಲಿಕ ಕಾರ್ಯಕರ್ತರಾಗಿ ಪ್ರಾರಂಭಿಸಿದ್ದರು. ಮೃತರು ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.
ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಹಾಗೂ ವಿವಿಧ ಪಕ್ಷಗಳ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ. "ಸರಳ ಸಜ್ಜನಿಕೆಯ ನಾಯಕ, ಪಕ್ಷ ಕಟ್ಟಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಅಪಾರ ಕೊಡುಗೆ ನೀಡಿದ್ದ ನಾಗೇಶ್ ಅವರ ಅಗಲಿಕೆ ನಾಡಿಗೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



