ರಾಜ್ಯ

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ
ಶಿವಶಂಕರಪ್ಪ ಸಾಹುಕಾರ್
Published On :

ಬೆಂಗಳೂರು: ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ಅಲ್ಲದೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕಗೊಳಿಸುವಂತೆ ಸೂಚನೆ ನೀಡಿದೆ.

KPSC ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 10ರಂದು ರಾಜ್ಯಪಾಲರು ಅಮಾನತು ಮಾಡಿದ್ದರು. ಈ ಸಂಬಂಧ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾವ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ.

ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ ಅಥವಾ ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದು ಕೋರ್ಟ್ ಹೇಳಿದ್ದು, 7 ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.