ರಾಜ್ಯ

ಬಿ.ಸಿ ನಾಗೇಶ್ ನನ್ನ ಹಳೆಯ ಸ್ನೇಹಿತ, ಪ್ರಾಥಮಿಕ ಶಿಕ್ಷಣಕ್ಕೆ ಅವರ ಕೊಡುಗೆ ಶ್ಲಾಘನೀಯ: ಸಿಎಂ ಶಿವಕುಮಾರ್ ಸಂತಾಪ; Video

ನಾಗೇಶ್ ನನ್ನ ಹಳೆಯ ಸ್ನೇಹಿತರಾಗಿದ್ದು, ಶಾಸಕರಾಗಿ ಹಾಗೂ ಸಚಿವರಾಗಿ ತಮ್ಮೊಂದಿಗೆ ಸೇವೆ ಸಲ್ಲಿಸಿದ್ದರು. ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಬಿ.ಸಿ ನಾಗೇಶ್ ನನ್ನ ಹಳೆಯ ಸ್ನೇಹಿತ, ಪ್ರಾಥಮಿಕ ಶಿಕ್ಷಣಕ್ಕೆ ಅವರ ಕೊಡುಗೆ ಶ್ಲಾಘನೀಯ: ಸಿಎಂ ಶಿವಕುಮಾರ್ ಸಂತಾಪ; Video
ನಾಗೇಶ್ ಅವರ ಅಂತಿಮ ದರ್ಶನ ಪಡೆದ ಡಿಕೆ.ಶಿವಕುಮಾರ್.
Published On :

ಬೆಂಗಳೂರು: ಮಾಜಿ ಶಾಸಕ ಹಾಗೂ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಗೇಶ್ ಅವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ ಅವರು, ನಾಗೇಶ್ ಅವರು ತಮ್ಮೊಂದಿಗೆ ಶಾಸಕರಾಗಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದರು.

ನಾಗೇಶ್ ನನ್ನ ಹಳೆಯ ಸ್ನೇಹಿತರಾಗಿದ್ದು, ಶಾಸಕರಾಗಿ ಹಾಗೂ ಸಚಿವರಾಗಿ ತಮ್ಮೊಂದಿಗೆ ಸೇವೆ ಸಲ್ಲಿಸಿದ್ದರು. ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಅವರ ಅಗಲಿಕೆ ಕುಟುಂಬ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು, ರಾಜ್ಯ ಸರ್ಕಾರದ ವತಿಯಿಂದ ಅವರಿಗೆ ಸೂಕ್ತ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.

ನನ್ನ ಹಳೆಯ ಸ್ನೇಹಿತ ನಾಗೇಶ್ ಅವರಿಗೆ ಗೌರವ ಸಲ್ಲಿಸಲು ಬಂದಿದ್ದೇನೆ. ಅವರು ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದರು. ಅವರಿಗೆ ಗೌರವ ಸಲ್ಲಿಸುವುದು ನನ್ನ ಕರ್ತವ್ಯ. ರಾಜ್ಯ ಸರ್ಕಾರವೂ ಅವರಿಗೆ ಸಂಪೂರ್ಣ ಗೌರವ ನೀಡಲಿದೆ. ಅವರ ನಿಧನವು ಕುಟುಂಬಕ್ಕೆ ಮಾತ್ರವಲ್ಲ, ಅವರ ಪಕ್ಷಕ್ಕೂ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ” ಎಂದು ಹೇಳಿದರು.

ಇದೇ ವೇಳೆ ತಮ್ಮ ದೆಹಲಿ ಹಾಗೂ ಚೆನ್ನೈ ಪ್ರವಾಸದ ಬಗ್ಗೆಯೂ ಮಾಹಿತಿ ನೀಡಿದ ಅವರು, ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

ನಾಳೆ ಚೆನ್ನೈಗೆ ಭೇಟಿ ನೀಡಲಿದ್ದೇನೆ. ದಕ್ಷಿಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಲು ಗೃಹ ಸಚಿವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.