ರಾಜ್ಯ

ಕೃಷ್ಣ ಬೈರೇಗೌಡಗೆ ಮತ್ತೊಂದು ಮಹತ್ವದ ಖಾತೆ; ಹೆಚ್ಚುವರಿಯಾಗಿ ಸಂಸದೀಯ ವ್ಯವಹಾರಗಳ ಹೊಣೆ

ಕೃಷ್ಣಬೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಕೃಷ್ಣ ಬೈರೇಗೌಡಗೆ ಮತ್ತೊಂದು ಮಹತ್ವದ ಖಾತೆ; ಹೆಚ್ಚುವರಿಯಾಗಿ ಸಂಸದೀಯ ವ್ಯವಹಾರಗಳ ಹೊಣೆ
ಕೃಷ್ಣ ಬೈರೇಗೌಡ
Published On :

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆಯಲ್ಲಿ ಮತ್ತೊಂದು ಬದಲಾವಣೆಯಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ಖಾತೆಗಳ ಮರುಹಂಚಿಕೆ ಮಾಡಲಾಗಿದೆ ಎಂದು ರಾಜ್ಯಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

ಕೃಷ್ಣಬೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಇದೀಗ ಸಂಸದೀಯ ವ್ಯವಹಾರಗಳ ಖಾತೆಯೂ ಸೇರ್ಪಡೆಯಾಗಿರುವುದರಿಂದ ಅವರ ಹೊಣೆಗಾರಿಕೆ ಮತ್ತಷ್ಟು ವಿಸ್ತರಣೆಗೊಂಡಿದೆ.

ಇದೇ ವೇಳೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಉಸ್ತುವಾರಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ತಮ್ಮ ಬಳಿ ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.