ಹನೂರು ಶೂಟೌಟ್ ಕೇಸ್: ಸಂತ್ರಸ್ತರ ಕುಟುಂಬಗಳಿಗೆ ತಮಿಳುನಾಡು ನಾಯಕರ ಸಾಂತ್ವನ; ಪರಿಹಾರದ ಭರವಸೆ
ಮೂವರು ಮೃತಪಟ್ಟಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹೇಳಿಕೆ ನೀಡಿದ ಒಂದು ದಿನದ ಬಳಿಕ, ತಮಿಳುನಾಡು ವಿಧಾನಸಭೆಯಲ್ಲೂ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು.

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಶೂಟೌಟ್ ಪ್ರಕರಣ ಕುರಿತು ತಮಿಳುನಾಡಿನ ರಾಜಕೀಯ ಪಕ್ಷಗಳು ಹಾಗೂ ನಾಯಕರು ಧ್ವನಿ ಎತ್ತಿದ್ದು, ವಿವಾದಕ್ಕೆ ಹೊಸ ತಿರುವು ದೊರೆತಿದೆ.
ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ ತಮಿಳುನಾಡಿನ ವಿವಿಧ ಪಕ್ಷಗಳ ನಾಯಕರು, ಹೆಚ್ಚಿನ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಮೂವರು ಮೃತಪಟ್ಟಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹೇಳಿಕೆ ನೀಡಿದ ಒಂದು ದಿನದ ಬಳಿಕ, ತಮಿಳುನಾಡು ವಿಧಾನಸಭೆಯಲ್ಲೂ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು.
ಇದರ ಬೆನ್ನಲ್ಲೇ ವಿವಿಧ ಪಕ್ಷಗಳ ರಾಜಕೀಯ ನಾಯಕರ ನಿಯೋಗವೊಂದು ಹನೂರಿನ ಥೋಮಿಯಾರ್‌ಪಾಳ್ಯದಲ್ಲಿರುವ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿತು.
ಮಾಜಿ ಶಾಸಕ ವೇಲುಸ್ವಾಮಿ ನೇತೃತ್ವದಲ್ಲಿ ವೆಂಕಟೇಶ್ವರನ್, ಧರ್ಮಪುರಿ ಪಿಎಂಕೆ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವು ನಾಯಕರು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.
ಕರ್ನಾಟಕದ ಗಡಿ ಭಾಗದಲ್ಲಿ ವಾಸಿಸುತ್ತಿರುವ ತಮಿಳು ಮೂಲದ ಜನರಿಗೆ ತಮಿಳುನಾಡು ಸರ್ಕಾರ ನೀಡಿರುವ ಪರಿಹಾರದ ಬಗ್ಗೆಯೂ ಅವರು ಚರ್ಚಿಸಿದರು.
ಈ ಸಂದರ್ಭಧಲ್ಲಿ ಮಾತನಾಡಿದ ಮಾಜಿ ಶಾಸಕ ವೇಲುಸ್ವಾಮಿ ಅವರು, ಮೃತರಿಗೆ ನ್ಯಾಯ ದೊರೆಯುವವರೆಗೆ ತಮ್ಮ ಪಕ್ಷ ಈ ವಿಚಾರವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಬಳಿಕ ಪಿಎಂಕೆ ನಿಯೋಗ ಥೋಮಿಯಾರ್‌ಪಾಳ್ಯ ಚರ್ಚ್‌ನಲ್ಲಿ ಸಭೆ ನಡೆಸಿ, ಮುಂದಿನ ಹೋರಾಟದ ಕುರಿತು ಚರ್ಚಿಸಿತು. ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸುವುದಾಗಿ ನಾಯಕರು ತಿಳಿಸಿದ್ದಾರೆ.
ತಮಿಳುನಾಡು ನಾಯಕರ ಈ ಭೇಟಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿನ ಈಗಾಗಲೇ ಸೂಕ್ಷ್ಮವಾಗಿರುವ ಈ ಪ್ರಕರಣಕ್ಕೆ ಮತ್ತೊಂದು ರಾಜಕೀಯ ಆಯಾಮವನ್ನು ನೀಡಿದೆ.
ಕಾವೇರಿ ವಿವಾದದ ನಡುವೆಯೇ ಎರಡೂ ರಾಜ್ಯಗಳ ಗಡಿ ಭಾಗದ ಜನರು ಹಲವು ವರ್ಷಗಳಿಂದ ಸಾಮಾಜಿಕ, ಭಾಷಿಕ ಹಾಗೂ ಜೀವನೋಪಾಯದ ಸಂಬಂಧಗಳನ್ನು ಹಂಚಿಕೊಂಡಿದ್ದಾರೆ.
ಈ ಪ್ರದೇಶದ ಇತಿಹಾಸವು ಕುಖ್ಯಾತ ಕಾಡುಗಳ್ಳ ವೀರಪ್ಪನ್‌ನ ಚಟುವಟಿಕೆಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಹಲವು ದಶಕಗಳ ಕಾಲ ವೀರಪ್ಪನ್‌ನ ಚಟುವಟಿಕೆಗಳು ನಡೆದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




