ಕಾವೇರಿ ನೀರು ವಿವಾದ: ಸರ್ಕಾರಕ್ಕೆ ಎಲ್ಲವೂ ಗೊತ್ತಿದೆ, ನಾವು ರೈತರ ವಿರುದ್ಧವಲ್ಲ- ಸಚಿವ ಚಲುವರಾಯಸ್ವಾಮಿ
ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿರುವುದು ನನಗೆ ಗೊತ್ತಿದೆ. ಆದರೆ, ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕಾಗಿ ಕಾಯಬೇಕಾಗಿದೆ. ನಾವು ರೈತರ ವಿರುದ್ಧವಲ್ಲ. ಮಂಡ್ಯ ಸೇರಿದಂತೆ ಇತರ ಭಾಗಗಳ ರೈತರ ಸಮಸ್ಯೆಗಳು ನಮಗೆ ತಿಳಿದಿವೆ.

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ರೈತರ ಸಮಸ್ಯೆಗಳನ್ನು ಸರ್ಕಾರ ಅರ್ಥಮಾಡಿಕೊಂಡಿದ್ದು, ರೈತರ ವಿರುದ್ಧ ಸರ್ಕಾರವಿಲ್ಲ ಎಂದು ಸಚಿವ ಎನ್. ಚಲುವರಾಯಸ್ವಾಮಿ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡುವ ಆದೇಶಕ್ಕಾಗಿ ಕಾಯಬೇಕು ಎಂದು ರೈತರಿಗೆ ಮನವಿ ಮಾಡಿದರು.
ಮಂಡ್ಯ ಹಾಗೂ ಕಾವೇರಿ ಭಾಗದ ರೈತರ ಆತಂಕಗಳು ಸರ್ಕಾರದ ಗಮನದಲ್ಲಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿರುವುದು ನನಗೆ ಗೊತ್ತಿದೆ. ಆದರೆ, ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕಾಗಿ ಕಾಯಬೇಕಾಗಿದೆ. ನಾವು ರೈತರ ವಿರುದ್ಧವಲ್ಲ. ಮಂಡ್ಯ ಸೇರಿದಂತೆ ಇತರ ಭಾಗಗಳ ರೈತರ ಸಮಸ್ಯೆಗಳು ನಮಗೆ ತಿಳಿದಿವೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಈ ವಿಚಾರದ ಬಗ್ಗೆ ಸಂಪೂರ್ಣ ಅರಿವಿದೆ. ಅವರೂ ಇದೇ ಕಾವೇರಿ ಭಾಗದಿಂದ ಬಂದವರು” ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳುತ್ತಿದ್ದು, ಬಳಿಕ ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ. “ಒಳ್ಳೆಯದಾಗಲಿ ಎಂದು ಆಶಿಸೋಣ” ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕುರಿತು ನೀಡಿರುವ ಹೇಳಿಕೆಗೆ ಚಲುವರಾಯಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಅವರ ಹೇಳಿಕೆಯನ್ನು “ನಾಚಿಕೆಗೇಡಿನ ಹಾಗೂ ಆಕ್ಷೇಪಾರ್ಹ ಹೇಳಿಕೆ” ಎಂದು ಟೀಕಿಸಿದರು.
ಕುಮಾರಸ್ವಾಮಿ ಅವರಂತಹ ವ್ಯಕ್ತಿಯಿಂದ ಇಂತಹ ಹೇಳಿಕೆ ಬಂದಿರುವುದು ನಾಚಿಕೆಗೇಡಿನ ಸಂಗತಿ. ಅವರು ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು. ದೊಡ್ಡ ಕುಟುಂಬದಿಂದ ಬಂದವರು. ಜೊತೆಗೆ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂತಹ ವ್ಯಕ್ತಿ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡುವುದು ಅತ್ಯಂತ ಆಕ್ಷೇಪಾರ್ಹ ಎಂದು ಹೇಳಿದರು.
ಸೋನಿಯಾ ಗಾಂಧಿ ಭಾರತವನ್ನು ತಮ್ಮ ದೇಶವನ್ನಾಗಿ ಸ್ವೀಕರಿಸಿ ಭಾರತೀಯರಾಗಿದ್ದಾರೆ. ಅವರನ್ನು ಕುರಿತು ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



