ಬಾಂಗ್ಲಾದೇಶದ 868, ಪಾಕಿಸ್ತಾನದ 20 ಜನ ಸೇರಿ ಬೆಂಗಳೂರಿನಲ್ಲಿ 911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ: ಪ್ರಿಯಾಂಕ್ ಖರ್ಗೆ
ಇಂದು ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರವೇ ಒಪ್ಪಿಕೊಂಡಿದೆ.
ಇಂದು ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಇರುವ ವಿದೇಶಿಗರು 5304 ಜನ ಇದ್ದಾರೆ. ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ಇದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಮಾಹಿತಿ ಇಲ್ಲ. ಆದರೆ ಬೆಂಗಳೂರಿನಲ್ಲಿ ಮೂರು ವರ್ಷಗಳಲ್ಲಿ 911 ಜನ ಅಕ್ರಮ ವಲಸಿಗರನ್ನು ಗೃಹ ಇಲಾಖೆ ಗುರುತಿಸಿದೆ ಎಂದರು.
ಇದರಲ್ಲಿ ಬಾಂಗ್ಲಾದೇಶದ 868, ಪಾಕಿಸ್ತಾನ 20, ನೈಜೀರಿಯಾ 13, ಶ್ರೀಲಂಕಾ 8, ಮಯನ್ಮಾರ್ 01, ಉಗಾಂಡಾದವರು ಒಬ್ಬರು ಇದ್ದಾರೆ. 31 ದೇಶದ 365 ವಿದೇಶಿಗರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಮಾಹಿತಿಯನ್ನು ಗೃಹ ಸಚಿವರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



