ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ!
ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ.
ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಅಲ್ಲದೇ ಪೊಲೀಸ್ ಇಲಾಖೆಯನ್ನೇ ಮುಜುಗರಕ್ಕೀಡು ಮಾಡಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಡಿಯೋದಲ್ಲಿರುವ ಮಹಿಳಾ ಪೊಲೀಸ್ ಅಧಿಕಾರಿ ದೂರು ದಾಖಲಿಸಿದ್ದಾರೆ. ವಿಡಿಯೋ ವೈರಲ್ ಮಾಡಿದ ಇಬ್ಬರ ವಿರುದ್ಧ ಮಹಿಳಾಧಿಕಾರಿ, ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ರೌಡಿಶೀಟರ್ ಸಾಯಿಕುಮಾರ್ ಈ ವಿಡಿಯೋ ವೈರಲ್ ಮಾಡಿದ್ದಾನೆ ಎಂದು ಅಧಿಕಾರಿ ಆರೋಪಿಸಿದ್ದು, ಕೆಲ ವರ್ಷಗಳ ಹಿಂದೆ ರೌಡಿಶೀಟರ್ ಧರ್ಮ ಜೊತೆ ಆತ್ಮೀಯವಾಗಿದ್ದೆ. ವಿಡಿಯೋ ಕಾಲ್ನಲ್ಲಿ ಧರ್ಮ ಜೊತೆ ಮಾತಾಡಿದ್ದಾಗ ಆತನೇ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ವಿಡಿಯೋವನ್ನು ರೌಡಿಶೀಟರ್ ಸಾಯಿಕುಮಾರ್ಗೆ ಕೊಟ್ಟು ವೈರಲ್ ಮಾಡಿಸಿದ್ದಾನೆ. ಹೀಗಾಗಿ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಸಿದ್ದಾರೆ.
ನಾನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಉಸ್ತುವಾರಿ ಅಧಿಕಾರಿಯಾಗಿದ್ದೇನೆ. ನನಗೆ ಮದುವೆಯಾಗಿ ಮಕ್ಕಳಿದ್ದಾರೆ, ಸಮಾಜದಲ್ಲಿ ಒಳ್ಳೆಯ ಹೆಸರಿದೆ. ವಿಡಿಯೋ ವೈರಲ್ ಮಾಡಿ ನನ್ನ ಮಾರ್ಯದೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ರೌಡಿಶೀಟರ್ಗಳಾದ ಧರ್ಮ, ಸಾಯಿಕುಮಾರ್ ಹಾಗೂ ಇತರರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿ ದೂರು ನೀಡಿದ್ದಾರೆ.
ಮಹಿಳಾ ಅಧಿಕಾರಿ ನೀಡಿರುವ ಈ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಮನೆಯಲ್ಲೇ ತಂದೆ-ಮಗ ನಿಗೂಢ ಸಾವು; ಬೆಡ್ರೂಮ್ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



