SSLC, PUC ಟಾಪರ್‌ಗಳಿಗೆ 'ಪ್ರತಿಭಾ ಪುರಸ್ಕಾರ': ಆಗಸ್ಟ್ 25ರೊಳಗೆ ಅರ್ಜಿ ಸಲ್ಲಿಕೆಗೆ ಸೂಚನೆ..!
ವಿದ್ಯಾರ್ಥಿಗಳು ಜಿಬಿಎ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ಶಾಲೆ ಅಥವಾ ಕಾಲೇಜಿನ ಮುಖ್ಯಸ್ಥರಿಂದ ಪರಿಶೀಲನೆ ಮತ್ತು ದೃಢೀಕರಣ ಪಡೆಯಬೇಕು.

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ ‘ಪ್ರತಿಭಾ ಪುರಸ್ಕಾರ’ ನೀಡಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ತಿಳಿಸಿದ್ದಾರೆ.
2025-26ನೇ ಸಾಲಿನ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.99 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ, ವಸತಿ ಶಿಕ್ಷಣ ಸಂಸ್ಥೆಗಳು, ಸಿಬಿಎಸ್‌ಇ, ಐಸಿಎಸ್‌ಇ, ಜವಾಹರ ನವೋದಯ ವಿದ್ಯಾಲಯಗಳು (JNV) ಹಾಗೂ ಜಿಬಿಎ ವ್ಯಾಪ್ತಿಯ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಜಿಬಿಎ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ಶಾಲೆ ಅಥವಾ ಕಾಲೇಜಿನ ಮುಖ್ಯಸ್ಥರಿಂದ ಪರಿಶೀಲನೆ ಮತ್ತು ದೃಢೀಕರಣ ಪಡೆಯಬೇಕು. ನಂತರ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ಆಗಸ್ಟ್ 25ರ ಮಧ್ಯರಾತ್ರಿಯೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ನಗರದ ಎನ್.ಆರ್. ವೃತ್ತದಲ್ಲಿರುವ ಜಿಬಿಎ ಕೇಂದ್ರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಿಗೆ (ಶಿಕ್ಷಣ) ಖುದ್ದಾಗಿ ಸಲ್ಲಿಸಬಹುದು. ಇಲ್ಲವೇ greaterbengaluruauth@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ನಮೂನೆಯನ್ನು ಜಿಬಿಎ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅರ್ಹತಾ ಮಾನದಂಡಗಳು
2025-26ನೇ ಸಾಲಿನ SSLC ಪರೀಕ್ಷೆಯಲ್ಲಿ 625ಕ್ಕೆ 621 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳು 500ಕ್ಕೆ 496 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
ಅರ್ಜಿಗಳನ್ನು ಆಗಸ್ಟ್ 25ರ ಮಧ್ಯರಾತ್ರಿಯೊಳಗೆ ಸಲ್ಲಿಸಬೇಕು.
ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



