ರಾಜ್ಯ

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ: ಮಾಂಗಲ್ಯ ಸರಕ್ಕಾಗಿ 30 ಮೀಟರ್ ಎಳೆದೊಯ್ದ ಖದೀಮರು, ಮಹಿಳೆ ಸಾವು..!

ರಾಧಮ್ಮ ಸರವನ್ನು ಬಿಡದೆ ಪ್ರತಿರೋಧ ವ್ಯಕ್ತಪಡಿಸಿದಾಗ, ಸರಗಳ್ಳರು ಅವರನ್ನು ಸುಮಾರು 30 ಮೀಟರ್‌ವರೆಗೆ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಇದರಿಂದ ಅವರ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ.

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ: ಮಾಂಗಲ್ಯ ಸರಕ್ಕಾಗಿ 30 ಮೀಟರ್ ಎಳೆದೊಯ್ದ ಖದೀಮರು, ಮಹಿಳೆ ಸಾವು..!
ಮೃತ ಮಹಿಳೆ.
Published On :

ಬೆಂಗಳೂರು: ಚಿನ್ನದ ಸರ ಕಸಿಯಲು ಯತ್ನಿಸಿದ ಸರಗಳ್ಳರು ಮಹಿಳೆಯೊಬ್ಬರನ್ನು ರಸ್ತೆಯಲ್ಲಿ ಎಳೆದೊಯ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ಮೃತರನ್ನು ಮುಳಬಾಗಿಲು ತಾಲೂಕಿನ ತಾಯಲೂರು ಸಮೀಪದ ತಿರುಮನಹಳ್ಳಿ ಗ್ರಾಮದ ನಿವಾಸಿ ರಾಧಮ್ಮ (35) ಎಂದು ಗುರುತಿಸಲಾಗಿದೆ. ಆಗಸ್ಟ್ 15ರಂದು ಮುಳಬಾಗಿಲಿನಿಂದ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ತಮ್ಮ ನಿವಾಸಕ್ಕೆ ಅವರು ಬಂದಿದ್ದರು.

ಶನಿವಾರ ಬೆಳಗ್ಗೆ ಕಾಡುಗೋಡಿ-ಬಿಸನಹಳ್ಳಿ ಸೇತುವೆ ಬಳಿ ಆಟೋರಿಕ್ಷಾದಿಂದ ಇಳಿಯುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಸಿಯಲು ಯತ್ನಿಸಿದ್ದಾರೆ.

ರಾಧಮ್ಮ ಸರವನ್ನು ಬಿಡದೆ ಪ್ರತಿರೋಧ ವ್ಯಕ್ತಪಡಿಸಿದಾಗ, ಸರಗಳ್ಳರು ಅವರನ್ನು ಸುಮಾರು 30 ಮೀಟರ್‌ವರೆಗೆ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಇದರಿಂದ ಅವರ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ರಾಧಮ್ಮ ಅವರನ್ನು ದಾರಿಹೋಕರು ಮೊದಲು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಅವರು ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ರಾಧಮ್ಮ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ತಿರುಮನಹಳ್ಳಿ ಗ್ರಾಮಕ್ಕೆ ಕೊಂಡೊಯ್ಯಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸರಗಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.