ಕುಡಿದ ಮತ್ತಿನಲ್ಲಿ ಪೈಶಾಚಿಕ ಕೃತ್ಯ: ಪತ್ನಿ ಮೇಲೆ Paint thinner ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ..!
ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದು, ಈತನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ದಂಪತಿಗಳು 10 ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಕುಮಾರಿಯ ಇಬ್ಬರು ಮಕ್ಕಳು ನೇಪಾಳದಲ್ಲಿದ್ದಾರೆ.

ಬೆಂಗಳೂರು: ಪತ್ನಿ ಮೇಲೆ ಐದು ಲೀಟರ್ ಪೇಂಟ್ ಥಿನ್ನರ್ ಸುರಿದ ಪತಿಯೊಬ್ಬ ಬೆಂಕಿ ಹಚ್ಚಿ, ಹತ್ಯೆ ಮಾಡಲು ಯತ್ನಿಸಿರುವ ಘಟನೆಯೊಂದು ಸೂರ್ಯನಗರ ಪೊಲೀಸ್ ವ್ಯಾಪ್ತಿಯ ಚಂದಾಪುರ ವೃತ್ತದ ಬಳಿ ಸೋಮವಾರ ನಡೆದಿದೆ.
ಸಂತ್ರಸ್ತ ಮಹಿಳೆಯನ್ನು ನೇಪಾಳ ಮೂಲದ ಗಂಗಾ ಕುಮಾರಿ (29) ಎಂದು ಗುರ್ತಿಸಲಾಗಿದೆ. ಪತಿ ಬೆಂಕಿ ಹಚ್ಚುತ್ತಿದ್ದಂತೆಯೇ ಗಂಗಾ ಅವರು ಮನೆಯಿಂದ ಓಡಿ ಹೋಗಿದ್ದು, ಸ್ಥಳದಲ್ಲಿದ್ದ ನೀರಿನಿಂದ ಬೆಂಕಿ ನಂದಿಸಿಕೊಂಡಿದ್ದಾರೆ. ಬಳಿಕ ಸ್ಥಳೀಯರು ಆಕೆಯ ನೆರವಿಗೆ ಬಂದಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಯನ್ನು ಮಹೇಶ್ ಬಹದ್ದೂರ್ ಎಂದು ಗುರ್ತಿಸಲಾಗಿದ್ದು, ಈತ ಮದ್ಯವ್ಯಸನಿಯಾಗಿದ್ದು, ಆಗಾಗ್ಗೆ ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗುತ್ತಿದೆ.
ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದು, ಈತನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ದಂಪತಿಗಳು 10 ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಕುಮಾರಿಯ ಇಬ್ಬರು ಮಕ್ಕಳು ನೇಪಾಳದಲ್ಲಿದ್ದಾರೆ.

ನಡು ರಸ್ತೆಯಲ್ಲಿ ಪತ್ನಿಗೆ ಗುಂಡು, ಮನೆಗೆ ಬಂದು ಸಹೋದರಿ ಕೊಲೆ, ಆತ್ಮಹತ್ಯೆ; ಹನುಮಾನ್ ಚಾಲೀಸಾ, ವಾಟ್ಸ್ ಆಪ್ ಸ್ಟೇಟಸ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


