ಆಂಜನೇಯ ದೇಗುಲದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಕೈಯಿಂದಲೇ ಶುಚಿಗೊಳಿಸಲು ಹಿಂದೂ ಸಂಘಟನೆಗಳ ಪ್ರತಿಭಟನೆ!
ಶಿಗ್ಗಾಂವಿ ಪಟ್ಟಣದಲ್ಲಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ನಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ದುಷ್ಕರ್ಮಿಯೋರ್ವ ಅಕ್ರಮ ಪ್ರವೇಶ ಮಾಡಿದ್ದೂ ಅಲ್ಲದೆ ದೇಗುಲದ ಆವರಣದಲ್ಲೇ ಮೂತ್ರ..

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ.
ಶಿಗ್ಗಾಂವಿ ಪಟ್ಟಣದಲ್ಲಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ನಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ದುಷ್ಕರ್ಮಿಯೋರ್ವ ಅಕ್ರಮ ಪ್ರವೇಶ ಮಾಡಿದ್ದೂ ಅಲ್ಲದೆ ದೇಗುಲದ ಆವರಣದಲ್ಲೇ ಮೂತ್ರವಿಸರ್ಜನೆ ಮಾಡಿದ್ದಾನೆ.
ಆತನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದ್ದಾರೆ. ಈ ವೇಳೆ ಆತ ತನ್ನ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ದೌಡೌಯಿಸಿದ ಪೊಲೀಸರು ಕುಕೃತ್ಯವೆಸಗಿದ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬಂಧಿತನನ್ನು 31 ವರ್ಷದ ಮೊಹಮದ್ ಜಾಫರ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜಾಫರ್‌ನನ್ನು ಬಂಧಿಸಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್
ಇನ್ನು ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಯಿತು.
ದೇವಸ್ಥಾನದ ಬಳಿ ಮಲಗುತ್ತಿದ್ದ ಜಾಫರ್
ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ, ಜಾಫರ್ ಈ ಹಿಂದೆ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಆಗಾಗ್ಗೆ ಮಲಗುತ್ತಿದ್ದ ಎಂಬುದು ತಿಳಿದುಬಂದಿದೆ. ಆದರೆ, ಇದುವರೆಗೆ ಯಾರೂ ಆತನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ದೇವಸ್ಥಾನದಲ್ಲಿ ಇಂತಹ ಕೃತ್ಯ ಎಸಗಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



