ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ: ಕಬಿನಿ ಜಲಾಶಯ ನೀರಿನ ಮಟ್ಟ 9 ಅಡಿ ಕುಸಿತ!
ಶುಕ್ರವಾರ ಜಲಾಶಯದಿಂದ ನದಿಗೆ ಸುಮಾರು 14,600 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು 7,184 ಕ್ಯುಸೆಕ್‌ಗೆ ಇಳಿಕೆಯಾಗಿದೆ.

ಮೈಸೂರು: ತಮಿಳುನಾಡಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಸುಮಾರು 9 ಅಡಿ ಕುಸಿದಿದೆ.
ಒಳಹರಿವು ಕಡಿಮೆಯಾಗಿದ್ದರೂ ಹೊರಹರಿವನ್ನು ಸುಮಾರು 14,000 ಕ್ಯುಸೆಕ್‌ಗೆ ಹೆಚ್ಚಿಸಿರುವುದು ರೈತರಲ್ಲಿ ಆತಂಕ ಮೂಡಿಸಿದೆ.
ಆಗಸ್ಟ್ ಮೊದಲ ವಾರದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ, ಅದರಲ್ಲೂ ಕೇರಳದ ವಯನಾಡು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಭಾರೀ ಒಳಹರಿವಿನಿಂದ ಜಲಾಶಯ ಗರಿಷ್ಠ ಸಂಗ್ರಹ ಸಾಮರ್ಥ್ಯದ ಸಮೀಪ ತಲುಪಿತ್ತು.
ಆದರೆ, ಶುಕ್ರವಾರ ಜಲಾಶಯದಿಂದ ನದಿಗೆ ಸುಮಾರು 14,600 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು 7,184 ಕ್ಯುಸೆಕ್‌ಗೆ ಇಳಿಕೆಯಾಗಿದೆ.
ಒಳಹರಿವು ಕಡಿಮೆಯಾಗಿದ್ದರೂ ನಿರಂತರವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವುದಕ್ಕೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಜಲಾಶಯದ ನೀರಿನ ಸಂಗ್ರಹ ಪ್ರಮಾಣ ಮತ್ತಷ್ಟು ಕುಸಿದರೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆಯ ಮೇಲೆ ಪರಿಣಾಮ ಬೀರಬಹುದು ಎಂದು ರೈತರು ಕಳವಳ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12,000 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನೆರೆಯ ರಾಜ್ಯಕ್ಕೆ ಕಬಿನಿ ಜಲಾಶಯದಿಂದ ಗಣನೀಯ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ.
ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ ಸಮುದ್ರ ಮಟ್ಟದಿಂದ 2,284 ಅಡಿ ಇದ್ದು, ಪ್ರಸ್ತುತ ನೀರಿನ ಮಟ್ಟ 2,275.56 ಅಡಿಗೆ ಇಳಿಕೆಯಾಗಿದೆ.
ಜಲಾಶಯದ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 19.52 ಟಿಎಂಸಿ ಇದ್ದು, ಸದ್ಯ ಸುಮಾರು 14.57 ಟಿಎಂಸಿ ನೀರು ಸಂಗ್ರಹವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



