ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!

ಗುರುವಾರ ವಿಶೇಷ ನ್ಯಾಯಾಲಯವೊಂದು ಈ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ದಳದ (CID)ವಿಶೇಷ ತನಿಖಾ ತಂಡಕ್ಕೆ (SIT)ನಿರ್ದೇಶನ ನೀಡಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!
ಪ್ರಜ್ವಲ್ ರೇವಣ್ಣ
Published On :

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷಿಯೊಬ್ಬರಿಗೆ ಅವರ ಬೆಂಬಲಿಗರಿಂದ ದೂರವಾಣಿ ಮೂಲಕ ಬೆದರಿಕೆ ಕರೆಗಳು ಬಂದಿವೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಗುರುವಾರ ವಿಶೇಷ ನ್ಯಾಯಾಲಯವೊಂದು ಈ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ದಳದ (CID)ವಿಶೇಷ ತನಿಖಾ ತಂಡಕ್ಕೆ (SIT)ನಿರ್ದೇಶನ ನೀಡಿದೆ.

ಹಾಸನದ ಹೊಳೆನರಸೀಪುರದಲ್ಲಿರುವ ನಿವಾಸವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಪ್ರಜ್ವಲ್ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. 43 ವರ್ಷದ ಸಮಾಜ ಸೇವಕಿಯೊಬ್ಬರು ಈ ಪ್ರಕರಣದ ಸಾಕ್ಷಿಗಳಲ್ಲೊಬ್ಬರಾಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಬೆಂಬಲಿಗರೆಂದು ಹೇಳಿಕೊಳ್ಳುವವರಿಂದ ತಮಗೆ ಬೆದರಿಕೆ ಕರೆಗಳು ಬಂದಿವೆ ಎಂದು ಸಾಕ್ಷಿಯು ನ್ಯಾಯಾಲಯಕ್ಕೆ ತಿಳಿಸಿದ ನಂತರ ಈ ನಿರ್ದೇಶನ ಹೊರಬಿದ್ದಿದೆ.

ಆರೋಪಿಯ ವಿರುದ್ಧ ಸಾಕ್ಷ್ಯ ನುಡಿಯದಂತೆ ಕರೆ ಮಾಡಿದವರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಸಾಕ್ಷ್ಯ ನೀಡಿದರೆ ತಮಗೂ ಹಾಗೂ ತಮ್ಮ ಮಗನಿಗೂ ಪಾಠ ಕಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ತಮಗೆ ಅಥವಾ ತಮ್ಮ ಮಗನಿಗೆ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಪ್ರಜ್ವಲ್ ರೇವಣ್ಣ ಮತ್ತು ಇತರರೇ ನೇರ ಹೊಣೆಗಾರರಾಗುತ್ತಾರೆ ಎಂದೂ ಸಾಕ್ಷಿಯು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಹಾಲಿ ಹಾಗೂ ಮಾಜಿ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸ್‌ಐಟಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಎಡಿಜಿಪಿ) ನಿರ್ದೇಶನ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.