ಹಾಸನ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ; ಪ್ರಿಯಕರನಿಂದ ಕಿರುಕುಳ ಆರೋಪ
ಮೃತ ಯುವತಿಯನ್ನು ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ(19) ಎಂದು ಗುರುತಿಸಲಾಗಿದೆ.

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.
ಮೃತ ಯುವತಿಯನ್ನು ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ(19) ಎಂದು ಗುರುತಿಸಲಾಗಿದೆ. ಬಿಎ ಓದುತ್ತಿದ್ದ ರಚಿತಾ ಇದ್ದಕ್ಕಿದ್ದಂತೆ ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಯುವತಿ ಸುಮಾರು ಒಂದೂವರೆ ವರ್ಷದಿಂದ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ನವೀನ್ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಸಹ ಕೆಲಸ ಮಾಡುತ್ತಿದ್ದರು. ಇಬ್ಬರು ಪ್ರೀತಿಸುವ ವಿಷಯವನ್ನು ಸಾಕಮ್ಮ ಬಳಿ ರಚಿತಾ ಹಾಗೂ ನವೀನ್ ಹೇಳಿದ್ದರು. ಮದುವೆ ಮಾಡಿಸುವುದಾಗಿ ರಚಿತಾ ತಾಯಿ ಭರವಸೆಕೊಟ್ಟಿದ್ದರು. ಆದರೆ ಇತ್ತೀಚಿಗೆ ರಚಿತಾಳಿಗೆ ನವೀನ್ ಕಿರುಕುಳ ನೀಡುತ್ತಿದ್ದ ಎಂದು ಸಾಕಮ್ಮ ಆರೋಪಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



