ನಡುಸಮುದ್ರದಲ್ಲಿ ಕೆಟ್ಟು ನಿಂತ ಬೋಟ್; ರಕ್ಷಣೆಗೆ ಧಾವಿಸಿದ ಕೋಸ್ಟಲ್ ಗಾರ್ಡ್, 9 ಮೀನುಗಾರರ ರಕ್ಷಣೆ! Video
ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಹಾಗೂ ಒರಟಾದ ಅಲೆಗಳ ನಡುವೆಯೂ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ಪತ್ತೆಹಚ್ಚಿ, ಅದರಲ್ಲಿದ್ದ ಎಲ್ಲ 9 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದರು.

ಮಂಗಳೂರು: ನಡುಸಮುದ್ರದಲ್ಲಿ ಎಂಜಿನ್ ಕೈಕೊಟ್ಟು ಒರಟು ಸಮುದ್ರದಲ್ಲಿ ತೇಲಾಡುತ್ತಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ 9 ಸಿಬ್ಬಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಸುರಕ್ಷಿತವಾಗಿ ರಕ್ಷಿಸಿದೆ.
ನವ ಮಂಗಳೂರು ಕರಾವಳಿಯಿಂದ ಸುಮಾರು 20 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕಾ ದೋಣಿ Kaarunyam (IND-TN-15-MM-7971) ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ದಿಕ್ಕುತೋಚದೆ ತೇಲಾಡುತ್ತಿತ್ತು.
ಮಾಹಿತಿ ಲಭಿಸಿದ ಬೆನ್ನಲ್ಲೇ ಭಾರತೀಯ ಕೋಸ್ಟ್ ಗಾರ್ಡ್‌ನ C-448 ಹಡಗು ರಾತ್ರಿ ವೇಳೆ ಕ್ಷಿಪ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು.
ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಹಾಗೂ ಒರಟಾದ ಅಲೆಗಳ ನಡುವೆಯೂ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ಪತ್ತೆಹಚ್ಚಿ, ಅದರಲ್ಲಿದ್ದ ಎಲ್ಲ 9 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದರು.
ನಂತರ ರಕ್ಷಿಸಲ್ಪಟ್ಟ ಎಲ್ಲರನ್ನೂ ಮಂಗಳೂರು ಹಳೆ ಬಂದರಿಗೆ ಸುರಕ್ಷಿತವಾಗಿ ಕರೆತರಲಾಯಿತು. ಕೋಸ್ಟ್ ಗಾರ್ಡ್‌ನ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಅನಾಹುತವೊಂದು ತಪ್ಪಿದ್ದು, 9 ಮಂದಿ ಸುರಕ್ಷಿತವಾಗಿ ದಡ ಸೇರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



