ರಾಜ್ಯ

ವಿಜಯಪುರ ವಿಮಾನ ನಿಲ್ದಾಣ: ಜನವರಿ 2027 ರಿಂದ ಹಾರಾಟ ಕಾರ್ಯಾರಂಭ ಸಾಧ್ಯತೆ!

ಇತ್ತೀಚೆಗೆ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಇಲಾಖೆಯ ಅನುಮತಿ ಕೊರತೆ ಹಾಗೂ ಸುಪ್ರೀಂ ಕೋರ್ಟ್‌ ನೀಡಿದ್ದ ತಡೆಯಾಜ್ಞೆಯಿಂದ ವಿಮಾನ ನಿಲ್ದಾಣ ಯೋಜನೆ ವಿಳಂಬವಾಗಿತ್ತು.

ವಿಜಯಪುರ ವಿಮಾನ ನಿಲ್ದಾಣ: ಜನವರಿ 2027 ರಿಂದ ಹಾರಾಟ ಕಾರ್ಯಾರಂಭ ಸಾಧ್ಯತೆ!
ಸಂಗ್ರಹ ಚಿತ್ರ
Published On :

ವಿಜಯಪುರ: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಅಗತ್ಯ ಅನುಮತಿಗಳು ದೊರೆತರೆ 2027ರ ಜನವರಿ ಅಂತ್ಯದೊಳಗೆ ವಿಮಾನ ಹಾರಾಟ ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (KSIIDC) ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ್ ತಿಳಿಸಿದ್ದಾರೆ.

ಇತ್ತೀಚೆಗೆ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಇಲಾಖೆಯ ಅನುಮತಿ ಕೊರತೆ ಹಾಗೂ ಸುಪ್ರೀಂ ಕೋರ್ಟ್‌ ನೀಡಿದ್ದ ತಡೆಯಾಜ್ಞೆಯಿಂದ ವಿಮಾನ ನಿಲ್ದಾಣ ಯೋಜನೆ ವಿಳಂಬವಾಗಿತ್ತು ಎಂದು ಹೇಳಿದರು.

ಆದರೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಅವರ ನಿರಂತರ ಪ್ರಯತ್ನಗಳ ಬಳಿಕ ಸುಮಾರು ಮೂರು ವಾರಗಳ ಹಿಂದೆ ತಡೆಯಾಜ್ಞೆ ತೆರವುಗೊಂಡಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನಗಳ ಲ್ಯಾಂಡಿಂಗ್‌ಗೆ ಅಗತ್ಯ ಸಿದ್ಧತೆಗಳನ್ನೂ ಕೈಗೊಳ್ಳಲಾಗುತ್ತಿದೆ. ಈ ಸಂಬಂಧದ ಟೆಂಡರ್‌ ಪ್ರಕ್ರಿಯೆ ಒಂದು ವಾರದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ನಂಜಯ್ಯನಮಠ್ ಹೇಳಿದರು.

ತಾಂತ್ರಿಕ ಅಧಿಕಾರಿಗಳು ಹಾಗೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)ದಿಂದ ಅಂತಿಮ ಅನುಮತಿಗಳು ದೊರೆತರೆ, 2027ರ ಜನವರಿಯಲ್ಲೇ ಸಾಧ್ಯವಾದಷ್ಟು ಬೇಗ ವಿಮಾನ ಸೇವೆ ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.