ಬಿಜೆಪಿ MLC ಎನ್. ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಕಲಬುರಗಿ DC ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ಸಂದೀಪ್ ಪಾಟೀಲ್ ಅವರು, ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.
ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಕಠಿಣ ಕ್ರಮ ಕೈಗೊಂಡಿದ್ದು, ಬಂಧನ ವಾರಂಟ್ ಹೊರಡಿಸಿದೆ.
ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ರವಿಕುಮಾರ್ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಅಧೀನ ನ್ಯಾಯಾಲಯದಿಂದ ಸಮನ್ಸ್ ಬಂದಿದ್ದರೂ ಕೋರ್ಟ್‌ಗೆ ಗೈರಾದ ಕಾರಣ ಈಗ ಎಸಿಜೆಎಂ ನ್ಯಾಯಾಲಯವು ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



