ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; FIR ದಾಖಲು
ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಿಕ್ಕಮಗಳೂರು: ಆಗಸ್ಟ್ 26 ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಬೃಹತ್ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ.
ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್ ಸೇನೆ ಮುಜಾಹಿದ್ ಹಾಡು ಬಳಸಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಸ್ಲಿಂ ಯುವಕರು ಹಂಚಿಕೊಂಡಿದ್ದಾರೆ.
ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೋಮು ಸೌಹಾರ್ದ ಕದಡುವ ರೀತಿ ಹಾಡು ಬಳಕೆ ಮಾಡಿ, ಧಾರ್ಮಿಕ ನಂಬಿಕೆಗೆ ಅಪಮಾನ ಮಾಡುವ ರೀತಿ ಹಾಡು ಹಾಕಿದ್ದಾರೆ. ಪಾಕಿಸ್ತಾನದ ಸೈನಿಕರು ಎಂದು ಇರುವ ಹಾಡನ್ನ ಬಳಸಿದ್ದಾರೆ. ಉದ್ದೇಶ ಪೂರ್ವಕವಾಗಿ ದ್ವೇಷ ಹರಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಠಾಣೆಗೆ ದೂರು ದಾಖಲಿಸಿದ್ದಾರೆ.
ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಇನ್ಸ್ಟಾ ಪೇಜ್ ವಿರುದ್ಧ ನಗರ ಠಾಣೆಯ PSI ಧನರಾಜ್ ನೀಡಿದ ದೂರಿನಂತೆ ದೇಶವಿರೋಧಿ ಕೃತ್ಯ ಹಾಗೂ ಕೋಮು ಪ್ರಚೋದನೆ (BNS 196, 299) ಅಡಿಯಲ್ಲಿ ಸುಮೋಟೋ ಎಫ್‌ಐಆರ್ ದಾಖಲಾಗಿದೆ. ಈ ವಿಡಿಯೋ ಶೇರ್ ಮಾಡಿದವರನ್ನೂ ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



