SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್; ಬೆಂಗಳೂರಲ್ಲೇ ಅತಿ ಹೆಚ್ಚು!
ಕರ್ನಾಟಕದಲ್ಲಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು ರಾಜ್ಯದಲ್ಲಿ ಬರೋಬ್ಬರಿ 1,07,96,339 ಮತದಾರರ ಹೆಸರು ಡಿಲೀಟ್ ಆಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು ರಾಜ್ಯದಲ್ಲಿ ಬರೋಬ್ಬರಿ 1,07,96,339 ಮತದಾರರ ಹೆಸರು ಡಿಲೀಟ್ ಆಗಿದೆ.
ಇಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ರಾಜ್ಯದಲ್ಲಿ 1 ಕೋಟಿ, 7 ಲಕ್ಷ ಮತದಾರರ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದರು. 5,54,32,314 ಮತದಾರರ ಹೆಸರು ಉಳಿದುಕೊಂಡಿದೆ ಎಂದರು. ಶಾಶ್ವತವಾಗಿ ಸ್ಥಳಾಂತರವಾದವರ ಸಂಖ್ಯೆ 65,45,679 ಇದೆ. SIR ಪ್ರಕ್ರಿಯೆಯಲ್ಲಿ ಗೈರಾದವರ ಸಂಖ್ಯೆ 15,17,042. ಮೃತಪಟ್ಟ ಮತದಾರರ ಸಂಖ್ಯೆ 16,39,864 ಆಗಿದೆ. ಫಾರ್ಮ್ 6 ಬಳಸಿಕೊಂಡು ಮತದಾರರ ಪಟ್ಟಿಗೆ ಸೇರಬಹುದು ಎಂದು ಅನ್ಬುಕುಮಾರ್ ಹೇಳಿದರು.
ಮುಖ್ಯ ಆಯುಕ್ತ GBA ಎಂ ಮಹೇಶ್ವರ ರಾವ್ ಅವರ ಪ್ರಕಾರ, ಶೇಕಡ 45.13ರಷ್ಟು ಮತದಾರರನ್ನು ಗೈರುಹಾಜರಿ, ಸ್ಥಳಾಂತರಗೊಂಡ, ಸತ್ತ, ನಕಲು (ASDD) ವರ್ಗದ ಅಡಿಯಲ್ಲಿ ಪಟ್ಟಿ ಮಾಡಲಾಗಿದೆ.
ಈ ಹಿಂದೆ ಏಪ್ರಿಲ್ 18 ರಂದು GBA ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದಾಗ, ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿರುವ ಐದು ನಗರ ನಿಗಮಗಳ ವಾರ್ಡ್-ವಾರು ಮತದಾರರ ಪಟ್ಟಿಯಲ್ಲಿ 88,95,361 ಮತದಾರರಿದ್ದರು, ಆದಾಗ್ಯೂ, SIR ಪ್ರಾರಂಭವಾದ ನಂತರ ಈ ಪಟ್ಟಿಯನ್ನು ಬಳಕೆಯಲ್ಲಿಲ್ಲ ಎಂದು ಪರಿಗಣಿಸಲಾಗಿದೆ.
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ–2026 ರ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, 'ಭಾರತ ಚುನಾವಣಾ ಆಯೋಗದ ನಿರ್ದೇಶನಗಳ ಪ್ರಕಾರ, ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದರಲ್ಲಿ 27,69,866 ಪುರುಷ ಮತದಾರರು, 29,29,092 ಮಹಿಳಾ ಮತದಾರರು ಮತ್ತು 702 ಇತರ ಮತ್ತು ಟ್ರಾನ್ಸ್‌ಜೆಂಡರ್ ಮತದಾರರು ಇದ್ದಾರೆ. ಒಟ್ಟು 56,99,660 ಮತದಾರರಿದ್ದಾರೆ ಎಂದು ಹೇಳಿದರು.
ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿಲಾಗಿದ್ದು ಇಂದಿನಿಂದ ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



