'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA
ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್ ಅವರು ಭಾಗಿಯಾದ್ದಾರೆ.

ನವದೆಹಲಿ: ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಸೋಮವಾರ ನೀಡಿದ್ದ ಆದೇಶವನ್ನು ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಎತ್ತಿಹಿಡಿದಿದೆ.
ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್ ಅವರು ಭಾಗಿಯಾದ್ದಾರೆ.
ತಮಿಳುನಾಡಿನಿಂದ ನೀರಾವರಿ ಕಾರ್ಯದರ್ಶಿ ಪ್ರಶಾಂತ್, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯಂ ಅವರು ಭಾಗಿಯಾಗಿದ್ದರು.
ಸಭೆ ಬಳಿಕ ಮಾತನಾಡಿದ ಗೌರವ್ ಗುಪ್ತಾ ಅವರು, ‘ಇಂದು ಒಂದೂವರೆ ಗಂಟೆಗಳ ಕಾಲ ಸಭೆ ಮಾಡಿದ್ದೇವೆ. ನೆನ್ನೆ ಕೊಟ್ಟಿರುವ ಶಿಫಾರಸನ್ನು ಪಾಲಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ . ತಮಿಳುನಾಡು 28 ಟಿಎಂಸಿ ನೀರಿನ ಬೇಡಿಕೆ ಇಟ್ಟಿತ್ತು . ಆದರೆ, ಪ್ರಾಧಿಕಾರ ಅದನ್ನು ಒಪ್ಪಿಲ್ಲ. ಮುಂದೆ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಆಶಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ನೀರು ಹರಿಸಲು ಸೂಚಿಸಿದೆ ಎಂದರು.
ಇವತ್ತಿನ ಬೆಳವಣಿಗೆಯನ್ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಗಮನಕ್ಕೆ ತರುತ್ತೇವೆ. ಕಾನೂನು ಹೋರಾಟದ ಬಗ್ಗೆ, ಕಾನೂನು ತಂಡ ನಿರ್ಧಾರ ಮಾಡಲಿದೆ ಎಂದು ಗೌರವ್ ಗುಪ್ತಾ ಹೇಳಿದ್ದಾರೆ.
ನಿನ್ನೆ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಕರ್ನಾಟಕ ಸರ್ಕಾರಕ್ಕೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



