KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಕೇಂದ್ರ ಅಪರಾಧ ತನಿಖಾ ಇಲಾಖೆ(CID) ಅಧಿಕಾರಿಗಳು, ಎಲ್ಲಾ 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ ಜಾರಿ ಮಾಡಿದ್ದಾರೆ.
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.
ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಅಲ್ಲದೆ ಕೆಲವು ಅಭ್ಯರ್ಥಿಗಳನ್ನು ಇಡಿ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇದೀಗ ಅಭ್ಯರ್ಥಿಗಳಿಗೂ ನೋಟಿಸ್ ನೀಡಿದೆ.
ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಡಿ ನಡೆಸಿದ ಪ್ರತ್ಯೇಕ ವಿಚಾರಣೆ ವೇಳೆ ಲಭ್ಯವಾದ ಮಹತ್ವದ ಮಾಹಿತಿ ಮತ್ತು ತಪ್ಪೊಪ್ಪಿಗೆ ಹೇಳಿಕೆಗಳನ್ನು ಆಧರಿಸಿ ಸಿಐಡಿ ಅಧಿಕಾರಿಗಳು ಈ ಜಾಲವನ್ನು ಮತ್ತಷ್ಟು ಆಳವಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.
ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 ಓಎಂಆರ್ ಕಾರ್ಬನ್ ಶೀಟ್‍ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(FSL) ರವಾನಿಸಲಾಗಿದೆ. ಓಎಂಆರ್ ಶೀಟ್‍ಗಳೊಂದಿಗೆ ಕಾರ್ಬನ್ ಶೀಟ್‍ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ.
ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದು, ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



